ಪಹಲ್ಗಾಮ್ ಉಗ್ರರ ಅಟ್ಟಹಾಸ: ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ

owaisi
23/04/2025

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಅಮಾಯಕ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ.

ಉಗ್ರರ ಅಟ್ಟಹಾಸವನ್ನು ತೀವ್ರವಾಗಿ ಖಂಡಿಸಿರುವ ಅಸಾದುದ್ದೀನ್ ಓವೈಸಿ, ಈ ದಾಳಿಯ ಹಿಂದೆ ಯಾರೇ ಇದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ, ‘ಪಹಲ್ಗಾಮ್ ಭಯೋತ್ಪಾದಕ ದಾಳಿಯು ಅತ್ಯಂತ ಖಂಡನೀಯ ಮತ್ತು ಅದರ ಅಪರಾಧಿಗಳಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನಾವು ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನಿಲ್ಲುತ್ತೇವೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಓವೈಸಿ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

Exit mobile version