ಮದುವೆಯಾಗದ ನೋವು: ಗುಂಡು ಹಾರಿಸಿಕೊಂಡು ಯುವಕ ಸಾವಿಗೆ ಶರಣು

ಮಡಿಕೇರಿ: ಮದುವೆಯಾಗದ ಹಿನ್ನೆಲೆ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆಯ ಹೊರ ವಲಯದ ಕೆ.ಬೋಯಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಐಯ್ಯಂಗೇರಿ ಸಣ್ಣಪುಲಿಕೋಟು ಗ್ರಾಮದ ಬಿ.ಪಿ.ಅನಿಲ್ ಕುಮಾರ್ ಅಲಿಯಾಸ್ ಸತೀಶ್ (40) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.
ಮರದ ಆಚಾರಿ ಕೆಲಸ ಮಾಡುತ್ತಿದ್ದ ಸತೀಶ್ , ಬಳಿಕ ಕೋವಿ ದುರಸ್ತಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ 9:30ರ ಸುಮಾರಿಗೆ ಮನೆಗೆ ಬಂದು ಕೈ ಕಾಲು ತೊಳೆದು ಊಟ ಮಾಡಲು ಮುಂದಾಗಿದ್ದರು. ಅಣ್ಣ ಮತ್ತು ತಾಯಿ ಸ್ಥಳದಲ್ಲಿದ್ದಾಗಲೇ ಏಕಾಏಕಿ ಎದ್ದು ಕೋಣೆಯೊಳಗೆ ಹೋದ ಸತೀಶ್ ಕೋಣೆಯಲ್ಲಿದ್ದ ಕೋವಿಯಿಂದ ತಲೆಗೆ ಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತನ ಅಣ್ಣ ಬೆಳ್ಯಪ್ಪ ನೀಡಿದ ದೂರಿನ ಆಧಾರದ ಮೇಲೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಆದರೆ ಸತೀಶ್ ಮದುವೆಯಾಗದ ಹಿನ್ನೆಲೆ ಆಗಾಗ ಸಾವಿನ ಮಾತುಗಳನ್ನಾಡುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: