ಪಾಕಿಸ್ತಾನದಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಲಾಹೋರ್, ಮುಲ್ತಾನ್ ನಲ್ಲಿ 3 ದಿನಗಳ ಲಾಕ್ ಡೌನ್ ಜಾರಿ
ಪಾಕಿಸ್ತಾನದಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ಅತ್ಯಂತ ಕೆಟ್ಟ ವಾತಾವರಣ ನಿರ್ಮಾಣವಾಗಿದೆ. ಲಾಹೋರ್ ಮತ್ತು ಮುಲ್ತಾನ್ ನಂತಹ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 2000 ಗಡಿ ದಾಟಿದ್ದರಿಂದ ಅಲ್ಲಿನ ಸರ್ಕಾರವು ಲಾಕ್ ಡೌನ್ ವಿಧಿಸಿದೆ ಮತ್ತು ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವುದು ಸೇರಿದಂತೆ ತೀವ್ರ ಕ್ರಮಗಳನ್ನು ತೆಗೆದುಕೊಂಡಿದೆ.
ಇನ್ನು ಇಲ್ಲಿನ ಅಪಾಯಕಾರಿ ಮಟ್ಟದ ವಾಯುಮಾಲಿನ್ಯಕ್ಕೆ ಪ್ರತಿಕ್ರಿಯೆಯಾಗಿ, ಪಂಜಾಬ್ ಸರ್ಕಾರವು ಬುಧವಾರದೊಳಗೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂಬರುವ ಶುಕ್ರವಾರ, ಶನಿವಾರ ಮತ್ತು ಭಾನುವಾರ ಲಾಹೋರ್ ಮತ್ತು ಮುಲ್ತಾನ್ ನಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಿದೆ.
ಎಕ್ಯೂಐ ಅಪಾಯಕಾರಿಯಾಗಿ ಹೆಚ್ಚಿರುವವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಮತ್ತು ಈ ಅವಧಿಯಲ್ಲಿ ಗಾಳಿಯ ಗುಣಮಟ್ಟವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ಪರಿಸ್ಥಿತಿ ಸುಧಾರಿಸದಿದ್ದರೆ, ಲಾಕ್ಡೌನ್ ವಿಸ್ತರಿಸಬಹುದು, ಇದು ಈ ಪ್ರದೇಶದ ದೈನಂದಿನ ಜೀವನ ಮತ್ತು ಆರ್ಥಿಕ ಚಟುವಟಿಕೆಗಳ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj