ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ 42 ಕ್ಕೇರಿಕೆ

ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.
ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ.
ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಈ ಘಟನೆಯಲ್ಲಿ ಗಾಯಗೊಂಡ ಸುಮಾರು 50 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಐದು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಿವೆ ಎಂದು 1122 ರಕ್ಷಣಾ ತಂಡ ವಕ್ತಾರ ಬಿಲಾಲ್ ಫೈಜಿ ಡಾನ್ ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ. ಪಕ್ಷದ ಹಿರಿಯ ನಾಯಕನ ಆಗಮನಕ್ಕೂ ಮುನ್ನ ಸ್ಫೋಟ ಸಂಭವಿಸಿದೆ ಎಂದು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ಮಹಾನಿರೀಕ್ಷಕ ಅಖ್ತರ್ ಹಯಾತ್ ಗಂದಾಪುರ್ ಹೇಳಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಮುಖ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಜೀರ್ ಖಾನ್ ಹೇಳಿದ್ದಾರೆ.
ಮೌಲಾನಾ ಫಜ್ಲುರ್ ರೆಹಮಾನ್ ಅವರನ್ನು ತಾಲಿಬಾನ್ ಪರ ಧರ್ಮಗುರು ಎಂದು ಪರಿಗಣಿಸಲಾಗಿದೆ. ಅವರ ರಾಜಕೀಯ ಪಕ್ಷವು ಇಸ್ಲಾಮಾಬಾದ್‌ನಲ್ಲಿ ಸಮ್ಮಿಶ್ರ ಸರ್ಕಾರದ ಭಾಗವಾಗಿದೆ. ಅಕ್ಟೋಬರ್ ವೇಳೆಗೆ ನಡೆಯಲಿರುವ ಚುನಾವಣೆಗೆ ಬೆಂಬಲಿಗರನ್ನು ಸಜ್ಜುಗೊಳಿಸಲು ದೇಶಾದ್ಯಂತ ಸಭೆಗಳನ್ನು ಆಯೋಜಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw