ಪಾಕಿಸ್ತಾನ ಚುನಾವಣೆ: ಅತಂತ್ರ ಫಲಿತಾಂಶ; ಕಿಂಗ್ ಮೇಕರ್ ಆದ ಬಿಲಾವಲ್ ಭುಟ್ಟೋ
ಪಾಕಿಸ್ತಾನದಲ್ಲಿ ಪ್ರಕಟಗೊಂಡಿರುವ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದೆ. ಆದರೆ ಅತಂತ್ರ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ 54 ಸ್ಥಾನಗಳನ್ನು ಗೆದ್ದಿರುವ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಯ ಬಿಲಾವಲ್ ಭುಟ್ಟೋ ಝರ್ದಾರಿ ಸದ್ಯ ಕಿಂಗ್ ಮೇಕರ್ ಆಗಿದ್ದಾರೆ.
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸರಳ ಬಹುಮತಕ್ಕೆ ರಾಜಕೀಯ ಪಕ್ಷಕ್ಕೆ 133 ಸ್ಥಾನಗಳ ಅಗತ್ಯವಿದೆ. ಬಹುತೇಕ ಫಲಿತಾಂಶ ಪ್ರಕಟವಾಗಿದ್ದು, ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಇನ್ನೂ ಕೆಲವು ಕ್ಷೇತ್ರಗಳ ಮರು ಮತಎಣಿಕೆ ನಡೆಯುತ್ತಿದೆ.
ಜೈಲಲ್ಲಿರುವ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷದ ಬೆಂಬಲಿಗರು 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಪ್ರಧಾನಿ ನವಾಜ್ ಷರೀಫ್ ನೇತೃತ್ವದ ಮುಸ್ಲಿಂ ಲೀಗ್‌ಗೆ 73, ಬಿಲಾವಲ್ ಭುಟ್ಟೋ ಝರ್ದಾರಿ ನೇತೃತ್ವದ ಪಿಪಿಪಿ ಪಕ್ಷದ ಅಭ್ಯರ್ಥಿಗಳು 54 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ನವಾಜ್ ಷರೀಫ್ ಹಾಗೂ ಅವರ ಸಹೋದರ ಶೆಹಬಾಜ್ ಷರೀಫ್ ರ ಪಕ್ಷ, ಪಾಕಿಸ್ತಾನ್ ಮುಸ್ಲಿಂ ಲೀಗ್ ಮತ್ತು ಬಿಲಾವಲ್ ಭುಟ್ಟೋ ಜರ್ದಾರಿಯವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಿಕೊಂಡಿವೆ ಎಂದು ಜಿಯೋ ಟಿವಿ ಶನಿವಾರ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷದ ಬೆಂಬಲಿಗರು ಏನು ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.