ಪಾಕ್ ಗೆ ಮತ್ತೊಂದು ಶಾಕ್: ಪಾಕಿಸ್ತಾನ ಸರ್ಕಾರದ ಸಾಮಾಜಿಕ ಮಾಧ್ಯಮಗಳಿಗೆ ಭಾರತದಲ್ಲಿ ನಿರ್ಬಂಧ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಸಂದೇಶ ರವಾನಿಸಿದ್ದು, ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿದೆ.
ಭಾರತದಲ್ಲಿ ಲಭ್ಯವಿದ್ದ ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. ಫೇಸ್ ಬುಕ್ ಸೇರಿದಂತೆ ಎಲ್ಲ ಸಾಮಾಜಿಕ ಮಾಧ್ಯಮಗಳಲ್ಲಿನ ಪಾಕಿಸ್ತಾನ ಸರ್ಕಾರದ ಅಧಿಕೃತ ಖಾತೆಗಳನ್ನು ರದ್ದುಗೊಳಿಸಲಾಗಿದೆ
ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಆಶ್ರಯ ನೀಡುತ್ತಿದೆ ಮತ್ತು ಬೆಂಬಲಿಸುತ್ತಿದೆ ಹೀಗಾಗಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ವ್ಯಾಪಕ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ.
ಪಾಕಿಸ್ತಾನ ವಿರುದ್ಧದ ಕ್ರಮಗಳನ್ನು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸುದ್ದಿಗೋಷ್ಠಿ ಕರೆದು ಪ್ರಕಟಿಸಿದರು. ಈ ಮೂಲಕ ಪಾಕಿಸ್ತಾನಕ್ಕೆ ಶಾಕ್ ಮೇಲೆ ಶಾಕ್ ನೀಡಲು ಭಾರತ ಸರ್ಕಾರ ಮುಂದಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: