11:46 PM Wednesday 12 - March 2025

ಪಾಕಿಸ್ತಾನದಲ್ಲಿ ರೈಲಿನ ಮೇಲೆ ದಾಳಿ ಕೇಸ್: 27 ಉಗ್ರರ ಹತ್ಯೆ

12/03/2025

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಒಂಬತ್ತು ಬೋಗಿಗಳಿರುವ ಜಾಫರ್ ಎಕ್ಸ್ಪ್ರೆಸ್ ರೈ ಲಿನಲ್ಲಿ ಸುಮಾರು 400 ಪ್ರಯಾಣಿಕರು ಸಂಚರಿಸುತ್ತಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀ ಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಬಲೂಚಿಸ್ತಾನ್ ಲಿಬರೇ ಶನ್ ಆರ್ಮಿ ದಾಳಿಯ ಹೊಣೆ ಹೊತ್ತುಕೊಂಡಿತ್ತು.

ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯ ನಡುವೆಯೂ ಮಹಿಳೆಯರು ಹಾಗೂ ಮಕ್ಕಳು ಸೇ ರಿದಂ ತೆ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಈಗಲೂ ಮುಂದುವರಿದಿದ್ದು, ಸುರಂಗವನ್ನು ಭದ್ರತಾ ಪಡೆ ಸುತ್ತುವರಿದಿದೆ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version