ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತೀಯ ಸೇನೆಯಿಂದ ಪ್ರತ್ಯುತ್ತರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು–ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರ, ಅಖ್ನೂರ್ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 28–29ರ ರಾತ್ರಿ, ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಹಾಗೂ ಅಖ್ನೂರ್ ವಲಯದಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಪರಿಣಾಮಕಾರಿ ರೀತಿಯಲ್ಲಿ ಪ್ರತಿಕ್ರಿಯಿಸಿದೆ ಎಂದು ಅವರು ಹೇಳಿದ್ದಾರೆ.
ಉಭಯ ರಾಷ್ಟ್ರಗಳ ಸೇನೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯಾವುದೇ ನೋವುಗಳು ವರದಿಯಾಗಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: