ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸ್ಫೋಟ: ನಾಲ್ವರು ಸಾವು, 10 ಮಂದಿಗೆ ಗಾಯ - Mahanayaka

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸ್ಫೋಟ: ನಾಲ್ವರು ಸಾವು, 10 ಮಂದಿಗೆ ಗಾಯ

pak
29/01/2022

ಲಾಹೋರ್‌: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಡೇರಾ ಬುಗ್ತಿ ಜಿಲ್ಲೆಯ ಸುಯಿ ಎಂಬಲ್ಲಿರುವ ಮತ್ ಪ್ರದೇಶದಲ್ಲಿ ಸ್ಫೋಟವೊಂದು ಸಂಭವಿಸಿ, ನಾಲ್ವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ, ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಧಿಕಾರಿಗಳ ಪ್ರಕಾರ, ನೆಲಬಾಂಬ್ ಸ್ಫೋಟಗೊಂಡು ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಬಲೂಚಿಸ್ತಾನ ಮುಖ್ಯಮಂತ್ರಿ ಮೀರ್ ಅಬ್ದುಲ್ ಕುದ್ದೂಸ್ ಬಿಜೆಂಜೊ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಪ್ರಾಂತ್ಯದಲ್ಲಿ ಶಾಂತಿಯನ್ನು ಹಾಳುಮಾಡಲು ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಲೂಚಿಸ್ತಾನ್ ಅವಾಮಿ ಪಾರ್ಟಿ (ಬಿಎಪಿ) ನಾಯಕ ಸರ್ಫ್​ ರಾಜ್​ ಬುಗ್ತಿ ಅವರು ದಾಳಿಯನ್ನು ಖಂಡಿಸಿದ್ದು, ಬಲೂಚ್ ರಿಪಬ್ಲಿಕನ್ ಆರ್ಮಿ ಭಯೋತ್ಪಾದಕರು ಈ ಕೃತ್ಯ ನಡೆಸಿದ್ದಾರೆ. ಸರ್ಕಾರ ಇಂತಹ ದಾಳಿಗಳನ್ನು ಇನ್ನೂ ಎಷ್ಟು ದಿನ ಸಹಿಸಿಕೊಳ್ಳುತ್ತದೆ ಎಂದು ಸರ್ಫ್ ​ರಾಜ್​ ಬುಗ್ತಿ ಪ್ರಶ್ನಿಸಿದ್ದಾರೆಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಸರ್ಫ್​ರಾಜ್​ ಬುಗ್ತಿ ಅವರ ಸೋದರ ಸಂಬಂಧಿಯೂ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರವು ಮುಗ್ಧ ಜನರನ್ನು ರಕ್ಷಿಸಲು ವಿಫಲವಾಗಿದೆ ಎಂದು ಸರ್ಫ್ ​ರಾಜ್ ಅವರು ಆರೋಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಟಿ ಮೇಲೆ ಅತ್ಯಾಚಾರ ಆರೋಪ: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಬಂಧನ

ಐ ಪಿ ಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ

ಬಿಜೆಪಿ ಕಾರ್ಯಕರ್ತರು ಕರಪತ್ರ ಹಂಚುವ ಮೂಲಕ ಕೋವಿಡ್ ಹರಡುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ

ಗಾಂಧಿಧಾಮ್-ಪುರಿ ಎಕ್ಸ್ ​ಪ್ರೆಸ್ ರೈಲ್‌ ನಲ್ಲಿ ಬೆಂಕಿ

ದೇಶದಲ್ಲೇ ಬಿಎಸ್ಪಿ ಎರಡನೇ ಶ್ರೀಮಂತ ಪಕ್ಷ, ಮೊದಲ ಸ್ಥಾನದಲ್ಲಿ ಬಿಜೆಪಿ

 

ಇತ್ತೀಚಿನ ಸುದ್ದಿ