ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್ - Mahanayaka
4:59 PM Wednesday 11 - December 2024

ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್

aishwarya rai
20/12/2021

ನವದೆಹಲಿ: ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಂದೆ ಹಾಜರಾಗುವಂತೆ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಸಮನ್ಸ್ ನೀಡಲಾಗಿದೆ.

ಈ ಹಿಂದೆ ಅವರು ಎರಡು ಸಂದರ್ಭಗಳಲ್ಲಿ ಕಾಣಿಸಿಕೊಳ್ಳಲು ಸಮಯ ಕೋರಿದ್ದರು. ಪನಾಮಾ ಪೇಪರ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಈ ಮುಂದೂಡಿಕೆ ಅರ್ಜಿಯನ್ನು ಅವರು ಸಲ್ಲಿಸಿದ್ದರು. ಇದಕ್ಕೂ ಮುನ್ನ ಇಡಿ ಐಶ್ವರ್ಯಾ ಅವರ ಪತಿ ಹಾಗೂ ಸಿನಿಮಾ ನಟ ಅಭಿಷೇಕ್ ಬಚ್ಚನ್ ಅವರನ್ನು ಕೂಡ ವಿಚಾರಣೆ ನಡೆಸಿತ್ತು. ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ, ಶೀಘ್ರದಲ್ಲೇ ಈ ವಿಷಯದಲ್ಲಿ ಅಮಿತಾಬ್ ಬಚ್ಚನ್ ಅವರನ್ನು ಕೂಡ ಪ್ರಶ್ನಿಸಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಚಿತ್ರನಟಿ ಐಶ್ವರ್ಯಾ ರೈ ಅವರನ್ನು ದೆಹಲಿಯಲ್ಲಿ ವಿಚಾರಣೆ ನಡೆಸಲಾಗುವುದು ಎನ್ನಲಾಗಿದೆ. ಪನಾಮ ಪೇಪರ್ಸ್ ಪ್ರಕರಣದಲ್ಲಿ ಭಾರತದ ಸುಮಾರು 500ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ತಂದೆಗೆ ಜೀವಾವಧಿ ಶಿಕ್ಷೆ

ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ

ಬೈಕ್‌ ಗೆ ಲಾರಿ ಡಿಕ್ಕಿ: ಇಬ್ಬರು ಮಕ್ಕಳು ಸಹಿತ ತಾಯಿ ದಾರುಣ ಸಾವು

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?

ಇತ್ತೀಚಿನ ಸುದ್ದಿ