ಐದು ರಾಜ್ಯಗಳ ಚುನಾವಣಾ ಫಲಿತಾಂಶ: ಯಾವ ರಾಜ್ಯದಲ್ಲಿ ಯಾವ ಪಕ್ಷ ಮುನ್ನಡೆ?
02/05/2021
ನವದೆಹಲಿ: ಐದು ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದ್ದರೆ, ಕೇರಳದಲ್ಲಿ ಎಲ್ ಡಿಎಫ್ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 145 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಡಿಎಂಕೆ 124 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕೇರಳದಲ್ಲಿ ಎಲ್ ಡಿಎಫ್ 94 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂನಲ್ಲಿ ಬಿಜೆಪಿ 78 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪುದುಚೇರಿಯಲ್ಲಿ ಎನ್ ಆರ್ ಸಿ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಸದ್ಯ ಮುನ್ನಡೆ ಹಿನ್ನಡೆಗಳ ಲೆಕ್ಕಚಾರಗಳು ನಡೆಯುತ್ತಿದೆ. ಸಂಜೆಯ ವೇಳೆಗೆ ಸಂಪೂರ್ಣ ಚಿತ್ರಣ ಲಭಿಸಲಿದೆ. ಇನ್ನೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿ ಗ್ರಾಮದಿಂದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿದ್ದು, ಅವರಿಗೆ ಕೊಂಚ ಹಿನ್ನಡೆಯಾಗಿದೆ ಎಂದು ಹೇಳಲಾಗಿದೆ.