ಪಂಚೆ ಹಿಡಿದು ಡಾನ್ಸ್: ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿಕಾ ಮಂದಣ್ಣ!
ಸಿನಿಡೆಸ್ಕ್: ರಶ್ಮಿಕಾ ಮಂದಣ್ಣ ಯಾವ ಪಾತ್ರ ಮಾಡಿದರೂ ಅದು ದೊಡ್ಡ ಸುದ್ದಿಯಾಗುತ್ತದೆ. ಸದ್ಯ ತೆಲುಗಿನ ಜನಪ್ರಿಯ ನಟ ಅಲ್ಲು ಅರ್ಜುನ್ ಜೊತೆಗೆ ಅವರು ‘ಪುಷ್ಪ’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಒಂದೊಂದೇ ಹಾಡುಗಳು ಬಿಡುಗಡೆಯಾಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆ ಕೂಡ ಹೆಚ್ಚಾಗಿದೆ.
ತೆಲುಗು, ಕನ್ನಡ, ಮಲಯಾಳಂ, ತಮಿಳು ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಡಿಫರೆಂಟ್ ಗೆಟಪ್ ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಬಿಡುಗಡೆಯಾಗಿರುವ “ ಮೊಣಕಾಲ್ ಮೇಲ್ ಗಂಟಾ, ಪಂಚೆ ನೀ ಕಟ್ಟಿ ನಿಂತ್ರೆ, ಈ ಪಂಚಪ್ರಾಣವೇ ಹೋಗದೆ ಸಾಮಿ…’ ಎಂಬ ಹಾಡು ಸದ್ಯ ಯೂಟ್ಯೂಬ್ ನಲ್ಲಿ ದಾಖಲೆ ಸೃಷ್ಟಿಸಿದೆ.
ಪಂಚೆ ಉಟ್ಟು ಹಳ್ಳಿಯ ಯುವಕನಂತೆ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಇನ್ನೂ ರಶ್ಮಿಕಾ ಮಂದಣ್ಣ ಹಳ್ಳಿ ಹುಡುಗಿಯಂತೆ ಕಾಣಿಸಿಕೊಂಡಿದ್ದಾರೆ. ಇವರ ಸ್ಟೆಪ್ ಅಂತೂ ನೋ ಕಮೆಂಟ್ಸ್ ಎನ್ನುವ ಮಟ್ಟಕ್ಕಿದೆ ಎಂದು ಸಿನಿಪ್ರಿಯರು ಅಭಿಪ್ರಾಯಪಡುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka