ಪಾಂಗಾಳ ಶರತ್ ಶೆಟ್ಟಿ ಹತ್ಯೆ ಪ್ರಕರಣ: ಪಣಂಬೂರು ಬೀಚ್ ಬಳಿ ಮತ್ತೋರ್ವ ಆರೋಪಿಯ ಬಂಧನ
ಕಾಪು: ಪಾಂಗಾಳ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಸೋಮವಾರ ರಾತ್ರಿ ಪಣಂಬೂರು ಬೀಚ್ ಬಳಿ ಬಂಧಿಸಿದ್ದಾರೆ.
ಪಣಂಬೂರು ಕಲ್ಯ ನಿವಾಸಿ ನಾಗರಾಜ್(19) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ದಿವೇಶ್ ಶೆಟ್ಟಿ, ಲಿಖಿತ್ ಕುಲಾಲ್, ಆಕಾಶ್ ಕರ್ಕೇರ, ಪ್ರಸನ್ನ ಶೆಟ್ಟಿ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಅದರಲ್ಲಿ ಮೂವರನ್ನು ಒಂದು ವಾರಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳ ಲಾಗಿತ್ತು.
ಮಂಗಳವಾರ ನಾಗರಾಜ್ ಹಾಗೂ ಪೊಲೀಸ್ ಕಸ್ಟಡಿಯಲ್ಲಿದ್ದ ದಿವೇಶ್, ಲಿಖಿತ್ ಹಾಗೂ ಆಕಾಶ್ನನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಈ ಎಲ್ಲ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣದ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw