ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್! - Mahanayaka

ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್!

amarinder singh
30/09/2021

ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಬಗ್ಗೆ ವ್ಯಾಪಕವಾಗಿ ಹರಡಿರುವ ವದಂತಿಗಳ ಬಗ್ಗೆ ಅವರು ಗುರುವಾರ ಸ್ಪಷ್ಟನೆ ನೀಡಿದ್ದು, ತಾನು ಕಾಂಗ್ರೆಸ್ ತೊರೆಯುತ್ತಿರುವುದು ಸತ್ಯ ಆದರೆ, ಬಿಜೆಪಿಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅಮರೀಂದರ್ ಸಿಂಗ್  ಈ ಸ್ಪಷ್ಟನೆ ನೀಡಿದ್ದಾರೆ. ಇದಾದ ಬಳಿಕ ತಮ್ಮ ಟ್ವಿಟ್ಟರ್ ಖಾತೆಯಿಂದ ಕಾಂಗ್ರೆಸ್ ಎಂಬ ಪದವನ್ನು ಕಿತ್ತು ಹಾಕಿದ್ದಾರೆ. ಇನ್ನೂ ತಮ್ಮ ರಾಜೀನಾಮೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ನನ್ನದೇ ಆದ ಸಿದ್ದಾಂತಗಳು, ನಂಬಿಕೆಗಳಿವೆ. ಅದೇ ರೀತಿಯಲ್ಲಿ ನಡೆದುಕೊಂಡಿದ್ದೇನೆ. ಬೆಳಗ್ಗೆ 10:30ರ ಸುಮಾರಿನಲ್ಲಿ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ಕೇಳುತ್ತಾರೆ. ಯಾವುದೇ ಪ್ರಶ್ನೆಗಳನ್ನು ನನ್ನ ಎತ್ತಲಿಲ್ಲ. ಈಗಲೇ ರಾಜೀನಾಮೆ ಕೊಡುವುದಾಗಿ ಹೇಳಿ, 4 ಗಂಟೆಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ಈ ರೀತಿಯಲ್ಲಿ ನನ್ನನ್ನು ನೋಡಿಕೊಳ್ಳಲಾಗುತ್ತದೆ ಎಂಬುದನ್ನು ಊಹಿಸಿರಲಿಲ್ಲ. ಈವರೆಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ನಂಬಿಕೆ ಇಲ್ಲದ ಪಕ್ಷದಲ್ಲಿ ಹೇಗೆ ಮುಂದುವರೆಯಲು ಸಾಧ್ಯ, ಎಲ್ಲಿ ನಂಬಿಕೆ ಇರುವುದಿಲ್ಲವೋ ಅಲ್ಲಿ ಯಾರು ಕೂಡಾ ಮುಂದುವರೆಯಬಾರದು ಎಂದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ. ಇದರಲ್ಲಿ ಎರಡು ಮಾತಿಲ್ಲ, ಆದರೆ, ಬಿಜೆಪಿ ಸೇರುವುದಿಲ್ಲ ಎಂದು ಅವರು ಸ್ಪಷ್ಪಪಡಿಸಿದರು.

ರಾಹುಲ್ ಗಾಂಧಿ ಪಕ್ಷಕ್ಕೆ ಯುವಕರು ಸೆಳೆಯುಲು ಬಯಸುತ್ತಿದ್ದಾರೆ. ಆದರೆ, ಹಿರಿಯ ಮುಖಂಡರ ಸಲಹೆಗಳನ್ನು ಅವರು ಪರಿಗಣಿಸುತ್ತಿಲ್ಲ ಎಂದು ಕ್ಯಾಪ್ಟನ್ ಅಮರೀಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಂಜಾಬ್ ನಲ್ಲಿ ನೆಲಕಚ್ಚಲಿದೆ ಎಂದು ಅವರು ಊಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯಿಂದ ಅಂಬೇಡ್ಕರ್ ಅವರ ಜೀವನ ಕುರಿತ ಹಾಡು ಬಿಡುಗಡೆ

ಯತೀಶ್ ಕುಮಾರ್ ರವರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರವಿ ಡಿ. ಚೆನ್ನಣ್ಣನವರ್

ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆಗೆ ಹೊಸ ತಿರುವು: ನಾಪತ್ತೆಯಾದ ದಿನ ಹಣ ಡ್ರಾ ಮಾಡಿದ್ದ ಗಿರಿರಾಜ್!

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು | ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ

ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ!

ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದರೆ, ಮಹಿಳೆಯರ ಸಾಲ ಮನ್ನಾ | ಅನಿತಾ ಕುಮಾರಸ್ವಾಮಿ

ಅಮಾನವೀಯ ಘಟನೆ: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

ಇತ್ತೀಚಿನ ಸುದ್ದಿ