ಪಂಜಾಬ್‌‌ ನಲ್ಲಿ ಆಮ್ ಆದ್ಮಿಗೆ ಮುನ್ನಡೆ; ನವಜೋತ್ ಸಿಂಗ್ ಸಿಧು ಎರಡನೇ ಸ್ಥಾನಕ್ಕೆ - Mahanayaka
3:00 AM Wednesday 11 - December 2024

ಪಂಜಾಬ್‌‌ ನಲ್ಲಿ ಆಮ್ ಆದ್ಮಿಗೆ ಮುನ್ನಡೆ; ನವಜೋತ್ ಸಿಂಗ್ ಸಿಧು ಎರಡನೇ ಸ್ಥಾನಕ್ಕೆ

navachethan
10/03/2022

ಪಂಜಾಬ್: ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಆಮ್ ಆದ್ಮಿಗೆ 89, ಕಾಂಗ್ರೆಸ್ 17 ಹಾಗೂ ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿದೆ.

ಪಂಜಾಬ್ ಕಾಂಗ್ರೆಸ್‌ ನ ಸಿಎಂ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಕೂಡ ಪಂಜಾಬ್‌ನ ತಮ್ಮ ಎರಡೂ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಜಯಗಳಿಸಲಿದ್ದಾರೆ.

ಮತ ಎಣಿಕೆ ಕೇಂದ್ರಗಳ ಹೊರಗೆ ಪಕ್ಷದ ಕಚೇರಿ ಸೇರಿದಂತೆ ಹಲವೆಡೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು, ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಒಟ್ಟು 117 ಕ್ಷೇತ್ರಗಳಲ್ಲಿ ಆಪ್ 89 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 17, ಬಿಜೆಪಿ 4 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಅಧಿಕಾರದ ಗದ್ದುಗೆ ಏರಲು117 ಸ್ಥಾನಗಳ ಪೈಕಿ 59 ಸ್ಥಾನಗಳ ಅಗತ್ಯವಿದ್ದು, ಈ ಮ್ಯಾಜಿಕ್ ನಂಬರ್ ನ್ನು ದಾಟಿರುವುದರಿಂದ ಆಮ್ ಆದ್ಮಿ ಪಾರ್ಟಿ ಗೆಲುವಿನತ್ತ ದಾಪುಗಾಲಿಡುತ್ತಿದೆ.
ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವ ಕ್ಷೇತ್ರದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ಗೆ ಈ ಚುನಾವಣಾ ಫಲಿತಾಂಶ ತೀವ್ರ ಮುಖಭಂಗಕ್ಕೆ ಕಾರಣವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಂಜಾಬ್ ಸಿಎಂ ಚರಣ್‌ ಜಿತ್ ಸಿಂಗ್ ರಾಜೀನಾಮೆ

ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

ಸೊಸೆ ಮೇಲಿನ ಕೋಪ: ಮೊಮ್ಮಗಳನ್ನು ಬಲಿ ಪಡೆದ ಅತ್ತೆ

ಪಂಜಾಬ್​ ನಲ್ಲಿ ಬಿಜೆಪಿಗೆ ನೆಲೆ ಇರಲಿಲ್ಲ: ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮುನ್ನಡೆ ಸಾಧಿಸಿದ ಪಕ್ಷಗಳು ಯಾವುದು?

 

ಇತ್ತೀಚಿನ ಸುದ್ದಿ