ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಂಭೀರ ಗಾಯ
ಕೊರಟಗೆರೆ: ಮತಯಾಚನೆ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ಕಲ್ಲೇಟು ಬಿದ್ದಿದ್ದು, ತಲೆಗೆ ತೀವ್ರವಾದ ಏಟು ಬಿದ್ದು, ತೀವ್ರ ರಕ್ತಸ್ರಾವವಾಗಿದೆ.
ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೈರೇನಹಳ್ಳಿ ಕ್ರಾಸ್ ಬಳಿ ಪ್ರಚಾರದ ವೇಳೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಅವರ ತಲೆಗೆ ತೀವ್ರವಾದ ಏಟು ತಗಲಿದೆ.
ಪರಮೇಶ್ವರ್ ಅವರನ್ನು ತಕ್ಷಣವೇ ಅಕ್ಕಿರಾಂಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಕಡೆಗೆ ಕರೆದೊಯ್ಯಲಾಗಿದೆ.
ಈ ಹಿಂದೆ ನಾಮಪತ್ರ ಸಲ್ಲಿಕೆ ವೇಳೆಯಲ್ಲೂ ಪರಮೇಶ್ವರ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಆ ವೇಳೆ ಮಹಿಳಾ ಪೊಲೀಸ್ ಪೇದೆಗೆ ಆ ಕಲ್ಲು ತಗಲಿತ್ತು. ಇದೀಗ ಮತ್ತೊಮ್ಮೆ ಇಂತಹದ್ದೇ ಘಟನೆ ನಡೆದಿದ್ದು, ಪರಮೇಶ್ವರ್ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw