ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆ: ದಕ್ಷಿಣ ಕನ್ನಡ ಟಾಪ್- 12
ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಲ್ಲಿ ದೇಶಾದ್ಯಂತ ಆಯ್ಕೆ ಮಾಡಲಾಗಿದ್ದ 75 ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಟಾಪ್-12ನೇ ಸ್ಥಾನ ಗಳಿಸಿದೆ.
ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ 75 ಜಿಲ್ಲೆಗಳನ್ನು ಆಯ್ಕೆ ಮಾಡಿ ಇದೇ ಆ.15ರ ಸೋಮವಾರ ಅಂತಿಮ ಗಡುವು ನೀಡಿತ್ತು. 75 ಜಿಲ್ಲೆಗಳ ಪೈಕಿ 12 ಜಿಲ್ಲೆಗಳು ಶೇಕಡಾ 100 ಗುರಿ ಸಾಧಿಸಿವೆ.
ಈ ಯೋಜನೆಯಡಿ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಕೈಗೊಂಡ ಕ್ರಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯೂ ಸಹ ಶೇ. 100 ಗುರಿ ಸಾಧಿಸಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka