ಪೋಷಕರೇ ಎಚ್ಚರ: ಮಕ್ಕಳನ್ನು ಬಳಸಿಕೊಂಡು ಮಾಂಸದಂಧೆ!
ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ ಎಂಬವರನ್ನು ಬಂಧಿಸಲಾಗಿದೆ.
ಕಾಫಿನಾಡಲ್ಲಿ ಸರ್ಕಾರಿ ಅಧಿಕಾರಿಯಿಂದ್ಲೇ ಮಕ್ಕಳ ಮೂಲಕ ಹಸಿಮಾಂಸ ದಂಧೆ ನಡೆದಿರುವುದು ಮಕ್ಕಳ ಪೋಷಕರನ್ನು ಬೆಚ್ಚಿಬೀಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಬಂಧಿತ ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿದೆ ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.
ಸುರೇಶ್ ಪ್ಯಾರಾ ಮೆಡಿಕಲ್ ಕೋರ್ಸ್ ಕೊಡಿಸುತ್ತೇನೆ ಎಂದು ಪುಸಲಾಯಿಸುತ್ತಿದ್ದ, ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ, ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನ ಚಂದನಾ ಬಳಿ ಕಳಿಸುತ್ತಿದ್ದ, ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನ ಅಲ್ಲೇ ಉಳಿಸಿಕೊಳ್ಳುತ್ತಿದ್ಲು, ಕಾಫಿ-ಟಿಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.