ಪಾರ್ಟಿ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ! - Mahanayaka

ಪಾರ್ಟಿ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ!

cab driver
22/09/2021

ಬೆಂಗಳೂರು: ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು,  ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿ  24 ಗಂಟೆಗಳಲ್ಲಿ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೇವರಾಜು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಹೊರಟಿದ್ದ ಯುವತಿ ಮಲ್ಲೇಶ್​ ಪಾಳ್ಯಕ್ಕೆ ತೆರಳಲು ಕ್ಯಾಬ್​ ಬುಕ್ ಮಾಡಿದ್ದಳು. ಆಕೆ ಕ್ಯಾಬ್​ ಏರುತ್ತಿದ್ದಂತೆಯೇ ಪಾನಮತ್ತಳಾಗಿದ್ದನ್ನು ಗಮನಿಸಿದ ಚಾಲಕ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ

ಆರೋಪಿ ದೇವರಾಜು ಇಟಿಯೋಸ್​ ಕಾರನ್ನು ಲೀಸ್ ​ಗೆ ಪಡೆದು ಕ್ಯಾಬ್​ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಪೊಲೀಸರು ಸದ್ಯ ಕಾರನ್ನೂ ವಶಕ್ಕೆ ಪಡೆದಿದ್ದು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಆರೋಪಿಯು ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ವಾದಿಸಿದ್ದಾನೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

ಉಂಡು ಮಲಗಿದರೂ ಮುಗಿಯಲಿಲ್ಲ ಗಂಡ ಹೆಂಡಿರ ಜಗಳ: ಪೊಲೀಸ್ ಠಾಣೆ ಎದುರು ಹಿಗ್ಗಾಮುಗ್ಗಾ ಥಳಿತ!

ರೇಣುಕಾಚಾರ್ಯ, ಕಾರಜೋಳ ಚಿರತೆ ಹಿಡಿಯುವುದರಲ್ಲಿ ಎಕ್ಸಪರ್ಟ್ ಗಳು | ಸದನದಲ್ಲಿ ಸ್ವಾರಸ್ಯಕರ ಚರ್ಚೆ

“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದ ತಾಯಿ, ಮಗ ದಾರುಣ ಸಾವು

ಓವೈಸಿ ಮನೆ ಧ್ವಂಸ ಪ್ರಕರಣ: ಐವರು ಹಿಂದೂ ಸೇನೆ ಕಾರ್ಯಕರ್ತರು ಅರೆಸ್ಟ್

ಯುವತಿಯೊಂದಿಗಿನ ಫೋಟೋ ಲೀಕ್ ಆಗುವ ಭೀತಿಯಿಂದ ಸ್ವಾಮೀಜಿ ಆತ್ಮಹತ್ಯೆ? | ಡೆತ್ ನೋಟ್ ನಲ್ಲಿ ಏನಿತ್ತು ಗೊತ್ತಾ?

ವಿಷ ಸೇವಿಸಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ಇತ್ತೀಚಿನ ಸುದ್ದಿ