ಪಾರ್ಟಿ ಮುಗಿಸಿ ಮಲಗಿದ್ದ ವೇಳೆ ಗುಡಿಸಲಿಗೆ ಬೆಂಕಿ: ವ್ಯಕ್ತಿ ಸಜೀವ ದಹನ

beedar
31/12/2022

ಬೀದರ್: ತಡರಾತ್ರಿ ಪಾರ್ಟಿ ಮಾಡಿದ ಬಳಿಕ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಸಜೀವವಾಗಿ ದಹನಗೊಂಡು ಮೃತಪಟ್ಟಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ.

ಜಗನ್ನಾಥ ಹಲಗೆ(60) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಮಾರುತಿ ಗೊರನೆ ಎಂಬವರೊಂದಿಗೆ ತಡ ರಾತ್ರಿ ಪಾರ್ಟಿ ಮಾಡಿ ಬಳಿಕ  ನಿದ್ದೆ ಮಾಡಿದ್ದರು. ಈ ವೇಳೆ ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದೆ.

ಬೆಂಕಿಯಲ್ಲಿ ಸಿಲುಕಿದ್ದ ಜಗನ್ನಾಥ ಹಲಗೆಯನ್ನು ರಕ್ಷಿಸಲು ಮಾರುತಿ ಪ್ರಯತ್ನಿಸಿದ್ದಾರೆ. ಈ ವೇಳೆ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಜೋಳ ಕಾಯಲು ಜಮೀನಿನಲ್ಲಿ ಪುಟ್ಟ ಗುಡಿಸಲು ನಿರ್ಮಿಸಿಕೊಂಡಿದ್ದರು. ಇದೇ ಗುಡಿಸಲಿನಲ್ಲಿ ರಾತ್ರಿ ಪಾರ್ಟಿ ಮಾಡಿದ್ದರು. ಬಳಿಕ ನಿದ್ದೆಗೆ ಜಾರಿದ್ದರು. ಈ ವೇಳೆ ದುರ್ಘಟನ ನಡೆದಿದೆ.

ಘಟನಾ ಸ್ಥಳಕ್ಕೆ ಭಾಲ್ಕಿ ತಾಲೂಕಿನ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version