ಪಟಾಕಿ ಘಟಕದಲ್ಲಿ ಭಾರೀ ಸ್ಫೋಟ | 11 ಸಾವು, 22  ಕಾರ್ಮಿಕರಿಗೆ ಗಂಭೀರ ಗಾಯ - Mahanayaka
8:50 PM Wednesday 11 - December 2024

ಪಟಾಕಿ ಘಟಕದಲ್ಲಿ ಭಾರೀ ಸ್ಫೋಟ | 11 ಸಾವು, 22  ಕಾರ್ಮಿಕರಿಗೆ ಗಂಭೀರ ಗಾಯ

12/02/2021

ವಿರುಧುನಗರ: ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ 11 ಮಂದಿ ಸಾವನ್ನಪ್ಪಿ, 22 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂನಲ್ಲಿ ನಡೆದಿದೆ.

ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಸಟ್ಟೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದೆ.

ಮೃತ ದೇಹಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವ ಹಿನ್ನೆಲೆಯಲ್ಲಿ ಗುರುತು ಪತ್ತೆ ಕೂಡ ಸಾಧ್ಯವಾಗಿಲ್ಲ.  ಘಟನೆಯ ಮಾಹಿತಿ ದೊರೆತ ತಕ್ಷಣವೇ ಮೂರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ತಲುಪಿದ್ದು, ಒಟ್ಟು 30 ರಕ್ಷಣಾ ಸಿಬ್ಬಂದಿ ಹಾಗೂ ಐವರು ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸ್ಫೋಟ ನಡೆದ ಸಂದರ್ಭದಲ್ಲಿ 50 ಮಂದಿ ಕೊಠಡಿಯಲ್ಲಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಸ್ಥಳೀಯ ಠಾಣಾ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು,  ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ