ಬಿಗ್ ಬ್ರೇಕಿಂಗ್ ನ್ಯೂಸ್: ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ವೈರಸ್ ಗೆ ಬಲಿ
07/05/2021
ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಈ ಬಗ್ಗೆ ಏಮ್ಸ್ ಆಸ್ಪತ್ರೆಯೇ ಮಾಹಿತಿ ನೀಡಿದೆ.
ತಿಹಾರ್ ಜೈಲ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಛೋಟಾ ರಾಜನ್ ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ವೈದ್ಯರ ಸತತ ಪ್ರಯತ್ನಗಳ ಬಳಿಕವೂ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. 2015ರಲ್ಲಿ ಇಂಡೋನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಛೋಟಾ ರಾಜನ್ ನನ್ನು ಬಂಧಿಸಿದ್ದರು.
ಭಯೋತ್ಪಾದನೆ ತಡೆ ಕಾಯ್ದೆ ಹಾಗೂ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಆತನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.