ಪತಿ–ಪತ್ನಿ ನಡುವೆ ಮನಸ್ತಾಪ: ಸಾವಿಗೆ ಶರಣಾದ ಪತ್ನಿ
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವಿವಾಹಿತ ಯುವತಿಯೊಬ್ಬಳ ಮೃತದೇಹ ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ.
ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ದಿವ್ಯಾ(26), ಮೃತಪಟ್ಟವರು. ಜನವರಿ 21ರಂದು ದಿವ್ಯಾ ಪತಿ ಹರೀಶ್ ಜೊತೆ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು.
ಈ ವೇಳೆ ಪತಿ–ಪತ್ನಿ ನಡುವೆ ಮನಸ್ತಾಪ ಉಂಟಾಗಿತೆನ್ನಲಾಗಿದೆ. ಇದರಿಂದ ಬೇಸರಗೊಂಡ ದಿವ್ಯಾ ಒಬ್ಬರೇ ಮನೆಗೆ ಹಿಂದಿರುಗಿದ್ದರು. ಈ ವಿಚಾರವಾಗಿ ಅಸಮಾಧಾನಗೊಂಡಿದ್ದ ದಿವ್ಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ಬಗ್ಗೆ ಸುರತ್ಕಲ್ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw