ಪತಿ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ಮಹಿಳೆ - Mahanayaka
6:11 PM Wednesday 11 - December 2024

ಪತಿ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ಮಹಿಳೆ

indore
17/01/2022

ಇಂದೋರ್: ಸ್ನೇಹಿತರ ಜೊತೆಗೆ ಸೇರಿ ತನ್ನ ಪತಿಯೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರ ಮೊರೆಹೋದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

32  ವರ್ಷ ವಯಸ್ಸಿನ ಸಂತ್ರಸ್ತ ಮಹಿಳೆ ತನ್ನ ಪತಿ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದು, ತನ್ನ ಪತಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು, ತನ್ನ ನಾಲ್ವರು ಸ್ನೇಹಿತರು ಹಾಗೂ ಮನೆ ಕೆಲಸದವನಿಂದಲೂ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ.

ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ವ್ಯಕ್ತಿಯನ್ನು ಮಹಿಳೆ ವಿವಾಹವಾಗಿದ್ದು, ವಿವಾಹವಾದ ಬಳಿಕ ಆರೋಪಿಗೆ ಈಗಾಗಲೇ ಒಂದು ಮದುವೆಯಾಗಿರುವುದು ತಿಳಿದು ಬಂದಿತ್ತು ಎನ್ನಲಾಗಿದೆ. ಮದುವೆಯ ಬಳಿಕ ಮಹಿಳೆಯ ಮೇಲೆ ಪತಿ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ.

ಶಿಪ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಫಾರ್ಮ್ ಹೌಸ್ ನಲ್ಲಿ ಈ ಘಟನೆ ನಡೆದಿದೆ. ಕಳೆದ ವರ್ಷ ಕೂಡ ಇದೇ ರೀತಿ ಅತ್ಯಾಚಾರ ನಡೆದಿತ್ತು. ಕೊಲೆ ಬೆದರಿಕೆ ಹಾಕಿದ ಹಿನ್ನಲೆ ವಿವಾಹಿತ ಮಹಿಳೆ ಬೆದರಿ ಸುಮ್ಮನಾಗಿದ್ದಳು ಆದರೆ ಯಾವಾಗ ಪತಿ ಮತ್ತು ಆಕೆಯ ಸ್ನೇಹಿತರ ಕಾಟ ಹೆಚ್ಚಾಗುತ್ತಿದ್ದಂತೆಯೇ ಮಹಿಳೆ ಪೊಲೀಸ್ ಠಾಣೆಯ ಮೆಟ್ಟಿಲೇರಿ ರಕ್ಷಣೆ ಕೇಳಿದ್ದಾರೆ.

ಇನ್ನೂ ಮಹಿಳೆಯ ಮೈಮೇಲೆ ಸಿಗರೇಟ್ ನಿಂದ ಸುಟ್ಟು, ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ, ಮಹಿಳೆಗೆ ಚಿತ್ರ ಹಿಂಸೆ ನೀಡಲಾಗಿದೆ ಎಂದೂ ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ದೂರಿನನ್ವಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆರೋಗ್ಯದ ಜೊತೆಗೆ ಚರ್ಮದ ಕಾಂತಿಗೆ ಬೀಟ್ರೂಟ್ ಸೇವನೆ ಉತ್ತಮ

ವಿಮಾನ ನಿಲ್ದಾಣ ಸಮೀಪ ಮೂರು ತೈಲ ಟ್ಯಾಂಕರ್‌ ಗಳ ಸ್ಫೋಟ

ಪ್ರಧಾನಿ ಮೋದಿ ಭದ್ರತಾ ಲೋಪದ ತನಿಖೆ: ನಿ.ನ್ಯಾಯಮೂರ್ತಿ ಇಂದು ಮಲ್ಹೋತ್ರಾಗೆ ಬೆದರಿಕೆ

ಪಂಜಾಬ್​ ವಿಧಾನಸಭೆ ಚುನಾವಣೆ: ಫೆ.20ಕ್ಕೆ ಮತದಾನ ಮುಂದೂಡಿಕೆ

ಚರ್ಮದ ಸಮಸ್ಯೆಗಳ ನಿವಾರಣೆಗೆ ವೀಳ್ಯದೆಲೆ ಪರಿಣಾಮಕಾರಿ

ಇತ್ತೀಚಿನ ಸುದ್ದಿ