ಪತಿಯ ಇನ್ನೊಂದು ಮುಖ ಬಯಲಾಗುತ್ತಿದ್ದಂತೆಯೇ ನೇಣಿಗೆ ಶರಣಾದ 4 ತಿಂಗಳ ಗರ್ಭಿಣಿ - Mahanayaka

ಪತಿಯ ಇನ್ನೊಂದು ಮುಖ ಬಯಲಾಗುತ್ತಿದ್ದಂತೆಯೇ ನೇಣಿಗೆ ಶರಣಾದ 4 ತಿಂಗಳ ಗರ್ಭಿಣಿ

khanjer galli
19/09/2021

ಬೆಳಗಾವಿ: ಪತಿಯ ಕಿರುಕುಳ ಸಹಿಸಲಾಗದೇ 4 ತಿಂಗಳ ಗರ್ಭಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯಲ್ಲಿ ನಡೆದಿದೆ.

ಮುಸ್ಕಾನ್ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದು, ಇವರು 8 ತಿಂಗಳ ಹಿಂದೆಯಷ್ಟೇ ಬೆಳಗಾವಿಯ ಶಹಾಪುರದ ಅಳವಣ ಗಲ್ಲಿ ನಿವಾಸಿ ರೋಹಿಮ್ ಎಂಬಾತನ ಜೊತೆಗೆ ವಿವಾಹವಾಗಿದ್ದರು. ಮದುವೆಯಾಗಿ ಒಂದು ತಿಂಗಳು ಸಭ್ಯನಂತಿದ್ದ ರೋಹಿಮ್ ಆ ಬಳಿಕ ತನ್ನ ಇನ್ನೊಂದು ಮುಖವನ್ನು ತೋರಿಸಿದ್ದಾನೆ.

ಪ್ರತೀ ದಿನ ಗಾಂಜಾ ಸೇವಿಸಿ ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಗರ್ಭಿಣಿ ಎಂದೂ ನೋಡದೇ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸುತ್ತಿದ್ದ ಎನ್ನಲಾಗಿದ್ದು, ಈತನ ಟಾರ್ಚರ್ ಸಹಿಸಲು ಸಾಧ್ಯವಾಗದೇ,ಮ ಮುಸ್ಕಾನ್ ನೇಣಿಗೆ ಶರಣಾಗಿದ್ದಾಳೆ.


Provided by

ಪತ್ನಿ ನೇಣಿಗೆ ಕೊರಳೊಡ್ಡಿದ ಬೆನ್ನಲ್ಲೇ ರೋಹಿಮ್ ನ ಮತ್ತಷ್ಟು ವಿಚಾರಗಳು ಕೂಡ ಬೆಳಕಿಗೆ ಬಂದಿದ್ದು, ರೋಹಿಮ್ ಮುಸ್ಕಾನ್ ಳ ದೂರದ ಸಂಬಂಧಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ. ಇದನ್ನು ಮುಸ್ಕಾನ್ ಪ್ರಶ್ನಿಸಿದ್ದಳು ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.

ಸದ್ಯ ಮುಸ್ಕಾನ್ ಳ ಕುಟುಂಬಸ್ಥರು ರೋಹಿಮ್ ವಿರುದ್ಧ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ ನೀಡುತ್ತಿದ್ದ ಬಗ್ಗೆ ದೂರ ದಾಖಲಿಸಿದ್ದು, ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ಇನ್ನಷ್ಟು ಸುದ್ದಿಗಳು…

ಬೋರ್ ವೇಲ್ ಗೆ ಬಿದ್ದು ಮಗು ಸಾವು ಪ್ರಕರಣಕ್ಕೆ ತಿರುವು: ತಂದೆಯಿಂದಲೇ ನಡೆದಿತ್ತು ಹೀನ ಕೃತ್ಯ

ಮಗಳನ್ನು ಚುಡಾಯಿಸಬೇಡ ಎಂದಿದ್ದಕ್ಕೆ ಬಾಲಕಿಯ ತಂದೆಗೆ ಮಾರಣಾಂತಿಕ ಹಲ್ಲೆ!

ಮೂತ್ರಪಿಂಡಗಳ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ!

JCI: “ಕ್ಷಯ ಮುಕ್ತ ಭಾರತ” ಜಾಗೃತಿ ಮೂಡಿಸಲಿರುವ ‘ಹೆಜ್ಜೆ ಬದಲಾದಾಗ’ ಕಿರುಚಿತ್ರ

ಯಾವುದೇ ಸಮುದಾಯ ಅಥವಾ ಧರ್ಮಗಳಿಗೆ ನೋವುಂಟು ಮಾಡಿದರೆ ಒಳ್ಳೆಯದಾಗುವುದಿಲ್ಲ | ಶೋಭಾ ಕರಂದ್ಲಾಜೆ

ಪ್ರಧಾನಿ ಮೋದಿಗೆ ಪರ್ಯಾಯ ರಾಹುಲ್ ಅಲ್ಲ, ಮಮತಾ ಬ್ಯಾನರ್ಜಿ | ಜಾಗೋ ಬಾಂಗ್ಲಾ ವರದಿ

ಯಾವುದೇ ಸಮುದಾಯ ಅಥವಾ ಧರ್ಮಗಳಿಗೆ ನೋವುಂಟು ಮಾಡಿದರೆ ಒಳ್ಳೆಯದಾಗುವುದಿಲ್ಲ | ಶೋಭಾ ಕರಂದ್ಲಾಜೆ

 

ಇತ್ತೀಚಿನ ಸುದ್ದಿ