ಪತ್ನಿ ರುಚಿಕರ ಅಡುಗೆ ಮಾಡಿಕೊಡುವುದಿಲ್ಲ ಎಂದು ಪತಿ ಆತ್ಮಹತ್ಯೆಗೆ ಶರಣು
ಆಂಧ್ರಪ್ರದೇಶ: ಪತ್ನಿ ರುಚಿಯಾಗಿ ಅಡುಗೆ ಮಾಡಿ ಕೊಡುತ್ತಿಲ್ಲವೆಂದು ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಗುಡೂರು ಮಂಡಲದ ಪಿಂಡಿವಾನಿಪಾಲೆಂ ಗ್ರಾಮದಲ್ಲಿ ನಡೆದು ಹೋಗಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ 30 ವರ್ಷದ ತಿರುಮಲ ರಾವ್ ಎಂದು ಗುರುತಿಸಲಾಗಿದೆ.ವೃತ್ತಿಯಲ್ಲಿ ಪೈಂಟರ್ ಆಗಿದ್ದ ಈತ ದಿನಾ ಕುಡಿದು ಬಂದು ಪತ್ನಿ ನಿರ್ಮಲಾ ಜ್ಯೋತಿಯೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ. ಕಳೆದ ವರ್ಷ ಮದುವೆಯಾಗಿದ್ದ ದಂಪತಿಗಳಿಗೆ ಒಬ್ಬಳು ಮಗಳಿದ್ದಾಳೆ.
ಶುಕ್ರವಾರ ಕುಡಿದು ಬಂದ ತಿರುಮಲ ರಾವ್ ಮನೆಯಲ್ಲಿ ರುಚಿಯಾಗಿ ಅಡುಗೆ ಮಾಡಿಲ್ಲವೆಂದು ಪತ್ನಿಯೊಂದಿಗೆ ಜಗಳ ಮಾಡಿದ್ದಾನೆ. ಮನೆ ಬಿಟ್ಟು ಹೋಗಿ ಸ್ನೇಹಿತ ಗೋಪಿ ಎಂಬಾತನ ಮನೆಯಲ್ಲಿ ಉಳಿದುಕೊಂಡಿದ್ದಾನೆ ನಂತರ ಮರುದಿನ ಸ್ನೇಹಿತ ಗೋಪಿ ಕೆಲಸಕ್ಕೆಂದು ಹೊರಗೆ ಹೋದಾಗ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಿಷಯ ತಿಳಿದ ನೆರೆಹೊರೆಯವರು ಪತ್ನಿ ಜ್ಯೋತಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಜ್ಯೋತಿ ಪತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಜ್ಯೋತಿಯವರು ನೀಡಿದ ದೂರಿನ ಆಧಾರದ ಮೇಲೆ ಪೆಡನಾ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೂವರು ಬಾಲಕರ ಮೇಲೆ ಅತ್ಯಾಚಾರ: ಮದ್ರಸ ಶಿಕ್ಷಕ, ಹಿರಿಯ ವಿದ್ಯಾರ್ಥಿ ಅರೆಸ್ಟ್
ಅಂಧರು ಗುರುತಿಸುವಂತಹ ವಿನ್ಯಾಸದ ಹೊಸ ನಾಣ್ಯ ಬಿಡುಗಡೆ
ಪ್ರವಾದಿ ವಿರುದ್ಧ ಹೇಳಿಕೆ: ಭಾರತದ ಉತ್ಪನ್ನಗಳನ್ನು ತೆಗೆದು ಹಾಕಿದ ಕುವೈತ್ ಸೂಪರ್ ಮಾರ್ಕೆಟ್!
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಯಾತ್ರಿಕರ ಕಾರು ಸೇತುವೆಗೆ ಡಿಕ್ಕಿ: ಇಬ್ಬರು ಸಾವು
ಶಿಕ್ಷಣ ಒಂದು ಧರ್ಮದ ತಳಹದಿಯಲ್ಲಿ ಇರಬಾರದು ಎಂದು ಅಂಬೇಡ್ಕರ್ ಹೇಳಿದ್ದರು: ರುಕ್ಮಯ ಎಂ. ಕಕ್ಕೆಪದವು