ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂದು ವಿಚ್ಛೇದನ ನೀಡಿದ ಪತಿ - Mahanayaka
12:15 PM Wednesday 5 - February 2025

ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂದು ವಿಚ್ಛೇದನ ನೀಡಿದ ಪತಿ

talak
24/09/2021

ಅಲಿಘಡ:   ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂಬ ಕಾರಣವನ್ನು ನೀಡಿ ವ್ಯಕ್ತಿಯೋರ್ವ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ಘಟನೆ ನಡೆದಿದ್ದು, ಇದೀಗ ಈ ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಬಗ್ಗೆ ಪತಿ ಪತ್ನಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಲಾಗುತ್ತಿದೆ.

2 ವರ್ಷಗಳ ಹಿಂದೆ ಕ್ವಾರ್ಸಿ ಗ್ರಾಮದ ಮಹಿಳೆಯೊಬ್ಬರು ಚಂದೌಸ್ ಗ್ರಾಮದ ವ್ಯಕ್ತಿಯನ್ನು ವಿವಾಹವಾಗಿದ್ದಳು. ವಿವಾಹದ ಬಳಿಕ ಇಬ್ಬರು ಕೂಡ ಸಣ್ಣ ಸಣ್ಣ ವಿಚಾರಕ್ಕೂ ಕಚ್ಚಾಡುತ್ತಿದ್ದರು. ಇದೀಗ ಪತಿಯು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಈ ಬಗ್ಗೆ ದೂರು ಪಡೆದುಕೊಂಡಿರುವ ಪೊಲೀಸರು ಇಬ್ಬರನ್ನೂ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಇನ್ನೂ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಮಹಿಳೆ, ತ್ರಿವಳಿ ತಲಾಖ್ ನಿಷೇಧವಿದ್ದರೂ ಅವರು ನನಗೆ ತಲಾಖ್ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರ ಹೇಳುವ ಪ್ರಕಾರ, ಮಹಿಳೆಗೆ ತನ್ನ ಪತಿಯೊಂದಿಗೆ ಬದುಕಲು ಆಸೆ ಇದೆ. ಆದರೆ, ಪತಿಯು ವಿಚ್ಛೇದನಕ್ಕಾಗಿ ಹಾತೊರೆಯುತ್ತಿದ್ದಾನೆ ಎನ್ನಲಾಗಿದೆ. ಅಂದ ಹಾಗೆ ಇವರಿಬ್ಬರಿಗೆ ಪುಟ್ಟ ಮಗು ಕೂಡ ಇದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ತುಪ್ಪ ಬೇಕಾ ತುಪ್ಪ ಎಂದು ಮನೆಯೊಳಗೆ ಎಂಟ್ರಿ ಕೊಡುತ್ತಿದ್ದ ಮಹಿಳೆಯರು ಅರೆಸ್ಟ್ | ಅಷ್ಟಕ್ಕೂ ಇವರು ಮಾಡ್ತಿದ್ದದ್ದೇನು ಗೊತ್ತಾ?

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ: ಗ್ಯಾಂಗ್ ಸ್ಟಾರ್ ಜಿತೇಂದರ್ ಗೋಗಿ ಸಹಿತ ನಾಲ್ವರು ಸಾವು

ವಿಧಾನಮಂಡಲ ಅಧಿವೇಶನದಲ್ಲಿ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ

ತಾತಾ ಆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ | ದೇವೇಗೌಡ್ರ ಮನೆಯಲ್ಲಿ ಸಂಭ್ರಮ

ಪ್ರತಿಭಟನಾಕಾರನ ದೇಹದ ಮೇಲೆ ಹಾರಿಹಾರಿ ಬಿದ್ದಿದ್ದ ಪತ್ರಕರ್ತ ಅರೆಸ್ಟ್

ಕ್ಯಾನ್ಸರ್ ನ್ನು ಗೆದ್ದವ ಪಾರ್ಟಿಯಲ್ಲಿ ಬಿಯರ್ ಬ್ಯಾರೆಲ್ ಸ್ಫೋಟಗೊಂಡು ಮೃತಪಟ್ಟ!

 

ಇತ್ತೀಚಿನ ಸುದ್ದಿ