ಪತ್ನಿಯ ಮೃತದೇಹ ಊರಿಗೆ ತರುತ್ತಿದ್ದ ವೇಳೆ ಅಪಘಾತ ಪತಿಯೂ ಸಾವು!
05/06/2021
ಒಡಿಶಾ: ಅನಾರೋಗ್ಯದಿಂದ ಮೃತಪಟ್ಟ ಪತ್ನಿಯ ಮೃತದೇಹವನ್ನು ಆಂಬುಲೆನ್ಸ್ ನಲ್ಲಿ ಮನೆಗೆ ತರುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಪರಿಣಾಮವಾಗಿ ಪತಿಯೂ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಒಡಿಶಾದ ಬೋಲಂಗಿರಿ ಜಿಲ್ಲೆಯ ಪಟ್ನಾಗರ್ ಪ್ರದೇಶದಲ್ಲಿ ನಡೆದಿದೆ.
ಬಿಪಿನ್ ಸೇತ್ ಎಂಬವರ ಪತ್ನಿ ಬರ್ಲಾ ಆಸ್ಪತ್ರೆಯಲ್ಲಿ ಪ್ಯಾರಾಲಿಸಿಸ್ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕಾಗಿ ಮೃತದೇಹವನ್ನು ಊರಿಗೆ ತರುತ್ತಿದ್ದ ವೇಳೆ, ಆಂಬುಲೆನ್ಸ್ ನಿಯಂತ್ರಣ ತಪ್ಪಿ ಪಾಟ್ನಾಗರ್ ಬಳಿಯ ಝಲೆಂಬರ್ ಬಳಿ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಬಿಪಿನ್ ಕೂಡ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಆಂಬುಲೆನ್ಸ್ ನಿಂದ ಚಾಲಕ ಹಾರಿ ಪರಾಗಿದ್ದು, ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಘಟನೆ ಸ್ಥಳಕ್ಕೆ ತಕ್ಷಣವೇ ಪೊಲೀಸರು ಆಗಮಿಸಿದ್ದು, ವಾಹನವನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ.