ಪತ್ನಿ ತಲೆಗೆ ಕತ್ತಿಯಿಂದ ಹಲ್ಲೆ ನಡೆಸಿ ಪರಾರಿಯಾದ ಪತಿ! - Mahanayaka
2:29 AM Thursday 12 - December 2024

ಪತ್ನಿ ತಲೆಗೆ ಕತ್ತಿಯಿಂದ ಹಲ್ಲೆ ನಡೆಸಿ ಪರಾರಿಯಾದ ಪತಿ!

mulki
03/04/2021

ಹಳೆಯಂಗಡಿ: ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಹಳೆಯಂಗಡಿಯ ತೋಕೂರು ಎಂಬಲ್ಲಿ ನಡೆದಿದ್ದು, ಪತ್ನಿಯು ತನ್ನ ಸಹೋದರಿಯ ಮನೆಯಲ್ಲಿದ್ದ ವೇಳೆ ಆರೋಪಿಯು ಹಲ್ಲೆ ನಡೆಸಿದ್ದಾನೆ.

39 ವರ್ಷ ವಯಸ್ಸಿನ ಪ್ರಮೋದ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಇವರ ಪತ್ನಿ ಕುಳಾಯಿ ನಿವಾಸಿ ಮೋಹನ್ ಎಂಬಾತ, ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಕತ್ತಿಯೊಂದ ತಲೆಯ ಎಡಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಮೋದ ಅವರು ಮುಲ್ಕಿಯ ಬ್ಯಾಂಕೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಸಹೋದರಿಯ ಮನೆಯಲ್ಲಿ ಪ್ರಮೋದ ಅವರು ಇದ್ದ ವೇಳೆ ಬಂದ ಪತಿಯು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದು, ಈ ವೇಳೆ ಮನೆಯವರು ಕೂಡ ತಡೆಯಲು ಯತ್ನಿಸಿದ್ದಾರೆ. ಆದರೆ ಆರೋಪಿಯು ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಈತನಿಂದ ಪ್ರಮೋದ ಅವರನ್ನು ಪಾರು ಮಾಡಲು ಯತ್ನಿಸಿದ ಅವರ ತಾಯಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಆರೋಪಿಯು ಯಾವ ಕಾರಣಕ್ಕಾಗಿ ಈ ದಾಳಿ ನಡೆಸಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ. ಗಾಯಗೊಂಡಿರುವ ಪ್ರಮೋದ ಅವರು ಮುಲ್ಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸುರತ್ಕಲ್  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ