ಸ್ಕೂಟಿಯಲ್ಲಿ ಪ್ರಯಾಣಿಸುತ್ತಿರುವ ವೇಳೆಯೇ ಪತ್ನಿಯನ್ನು ಇರಿದು ಕೊಂದ ಪತಿ!
ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೋರ್ವ ಭೀಕರವಾಗಿ ಹತ್ಯೆ ಗೈದ ಘಟನೆ ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ದರ್ಗಾಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಈ ಘಟನೆ ನಡೆದಿದೆ.
ಇಲ್ಲಿನ ಬಡಾಮಖಾನ್ ಬಡಾವಣೆಯ 30 ವರ್ಷ ವಯಸ್ಸಿನ ಅಮೀನಾ ಹತ್ಯೆಗೀಡಾದ ಮಹಿಳೆಯಾಗಿದ್ದು, ಅವರ ಪತಿ ಮಹಿಬೂಬ್ ಪಾಶಾ ತನ್ನ ಪತ್ನಿಯನ್ನೇ ಹತ್ಯೆಗೈದ ಆರೋಪಿಯಾಗಿದ್ದಾನೆ. ಶುಕ್ರವಾರ ಚಳ್ಳಕೆರೆ ಬಳಿಯ ದರ್ಗಾಕ್ಕೆ ಪತ್ನಿಯನ್ನು ಸ್ಕೂಟಿಯಲ್ಲಿ ಕರೆದೊಯ್ದಿದ್ದು, ದರ್ಗಾದಿಂದ ವಾಪಸ್ ಆಗುವಾಗ ಸ್ಕೂಟಿ ಚಾಲನೆಯಲ್ಲಿರುವಾಗಲೇ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದಿದ್ದಾನೆ.
ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಅಮೀನಾ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಆರೋಪಿ ಮಹಿಬೂಬ್ ಪಾಶಾನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮುಂದಿನ ಕ್ರಮ ಜರಗಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಬೈಕ್ ಸ್ಕಿಡ್ ಆಗಿ ಖ್ಯಾತ ನಟನಿಗೆ ಗಂಭೀರ ಗಾಯ: ಅಪೋಲೊ ಆಸ್ಪತ್ರೆಗೆ ದೌಡಾಯಿಸಿದ ಹಿರಿಯ ನಟರು
ಯುವತಿಯನ್ನು ಅತ್ಯಾಚಾರ ಎಸಗಿ ಪರಾರಿಯಾದ ಗ್ರಾಮ ಲೆಕ್ಕಾಧಿಕಾರಿ!
ಮತಾಂತರದ ಸುಳ್ಳು ಆರೋಪ ಹೊರಿಸಿ, ಗುಂಪಿನಿಂದ ದಾಂಧಲೆ: ಕ್ರಮಕ್ಕೆ ಆಗ್ರಹ
ಹುಡುಗಿಯರಿಗೆ ಉಚಿತ ಬ್ಯೂಟಿ ಪಾರ್ಲರ್, ಹಿರಿಯರಿಗೆ ತಂಬಾಕು, ಬೀಡಿ ಫ್ರೀ: ಗ್ರಾಪಂ ಅಭ್ಯರ್ಥಿಯ ಪ್ರಣಾಳಿಕೆ!
ಬಲೆಗೆ ಬಿದ್ದ ವಿಚಿತ್ರ ಬೃಹತ್ ಮೀನನ್ನು ಕಂಡು ಬೆಚ್ಚಿ ಬಿದ್ದ ಮೀನುಗಾರರು !
ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಖಾಸಗಿ ಅಂಗಕ್ಕೆ ರಾಡ್ ನುಗ್ಗಿಸಿದ ದುಷ್ಟರು: ಮಹಿಳೆಯ ಸ್ಥಿತಿ ಚಿಂತಾಜನಕ
ಸಾಬಿಯಾ ಸೈಫಿ ಅತ್ಯಾಚಾರ, ಬರ್ಬರ ಹತ್ಯೆ ವಿರುದ್ಧ ಎಸ್ ಡಿಪಿಐ ಬೃಹತ್ ಹಕ್ಕೊತ್ತಾಯ