ಬೈಕ್ ಸ್ಕಿಡ್ ಆಗಿ ಪತ್ರಿಕಾ ವಿತರಕನ ದಾರುಣ ಸಾವು
ಕುಂದಾಪುರ: ಬೈಕ್ ಸ್ಕಿಡ್ ಆದ ಪರಿಣಾಮ ಪತ್ರಿಕಾ ವಿತರಕ ಮೃತಪಟ್ಟ ಘಟನೆ ಅರೆಹೊಳೆ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ ಕಾಲನಿ ನಿವಾಸಿ 27ವರ್ಷದ ಗಿರೀಶ ಮೋಗವೀರ ಎಂದು ಗುರುತಿಸಲಾಗಿದೆ. ಅವರು ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಕೊಂಡು ಮನೆ ಕಡೆಗೆ ಹೋಗುತ್ತಿದ್ದ ಸಂದರ್ಭ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡರು.
ತಕ್ಷಣ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡುಹೋಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka