ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ
ಬೆಂಗಳೂರು: ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದ್ದು, ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವುದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ ಬಸವಣ್ಣನವರ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧರ ಮಾಡಲಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕದಲ್ಲಿ ಉಲ್ಲೇಖವಾಗಿಲ್ಲದಿದ್ದರೂ, ಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆ ಕ್ರಮವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಅವರು ತಿಳಿಸಿದರು.
ಪ್ರೊ.ಬರಗೂರು ರಾಮಚಂದ್ರಪ್ಪನವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪು ಕುರಿತಾದ 7 ಪದ್ಯಗಳಿಗೆ ಸೀಮಿತವಾಗಿದ್ದನ್ನು 10ಕ್ಕೇರಿಸಿದೆ. ನಾಡಪ್ರಭು ಕೆಂಪೇಗೌಡರ ಪಾಠ ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ. ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆಗೆ ಹಿಂದೂ ಧರ್ಮದ ವಿಷಯಗಳನ್ನು ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆಂಧ್ರಪ್ರದೇಶದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ, ನಿರ್ವಾಹಕನಿಗೆ ಮಾರಣಾಂತಿಕ ಹಲ್ಲೆ!
ಮಕ್ಕಳು ಅಳುತ್ತಾರೆ ಎಂದು ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಾಯಿ!: ಬೆಚ್ಚಿ ಬೀಳಿಸುವಂತಿದೆ ಈ ಘಟನೆ
ಅನಿಲ ಸೋರಿಕೆ: ಪ್ರಜ್ಞೆ ಕಳೆದುಕೊಂಡು ಬಿದ್ದ ಕಾರ್ಮಿಕರು: 30 ಮಂದಿ ಆಸ್ಪತ್ರೆಗೆ ದಾಖಲು
ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ: ಸಿಸಿ ಟಿವಿ ದೃಶ್ಯಗಳಿಂದ ಸಿಕ್ಕಿ ಬಿದ್ದ ಕಾಮುಕ