ಪಠ್ಯಪುಸ್ತಕದಲ್ಲಿ ಪ್ರವಾದಿಯ ಅವಹೇಳನ: ಕ್ಯಾಂಪಸ್ ಫ್ರಂಟ್ ನಿಂದ ದೂರು - Mahanayaka
1:10 PM Thursday 12 - December 2024

ಪಠ್ಯಪುಸ್ತಕದಲ್ಲಿ ಪ್ರವಾದಿಯ ಅವಹೇಳನ: ಕ್ಯಾಂಪಸ್ ಫ್ರಂಟ್ ನಿಂದ ದೂರು

Pravadi Muhammad
19/10/2021

ಬೆಳ್ತಂಗಡಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ , ಪ್ರವಾದಿ ಮುಹಮ್ಮದ್ (ಸ) (Pravadi Muhammad) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ ಬಿ.ಆರ್. ರಾಮಚಂದ್ರಯ್ಯರವರ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿಯು ಪುಂಜಾಲಕಟ್ಟೆ ಹಾಗು ಬೆಳ್ತಂಗಡಿ  ಠಾಣೆಗೆ ದೂರು ದಾಖಲಿಸಿದರು.

ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಾಮಚಂದ್ರಯ್ಯ (B.R.Ramachandraiha) ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ “ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್” ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಂಮರನ್ನು ಮತ್ತು ಪ್ರವಾದಿ ಮುಹಮ್ಮದ್ (ಸ) ರವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆಮಾಡಿಕೊಂಡಿದೆ.

ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ಪ್ರಕಾಶಕರ ವಿರುಧ್ದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ನಿಯೋಗವು ಪುಂಜಾಲಕಟ್ಟೆ ಹಾಗು ಬೆಳ್ತಂಗಡಿ ಠಾಣೆಯ ಪೊಲೀಸ್ ಠಾಣಾಧಿಕಾರಿಗೆ ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಶಹೀರ್ ಪಾಂಡವರಕಲ್ಲು,ಜಿಲ್ಲಾ ನಾಯಕರಾದ ನಾಸಿರ್,ಸಿದ್ದಿಕ್ ಹಾಗು ಏರಿಯಾ ನಾಯಕರಾದ ಸಹಾಲ್ ,ತಸ್ರೀಫ್ ಹಾಗು ಮರ್ಷದ್ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ನಿಷ್ಪಕ್ಷಪಾತ ನಿಲುವಿನ ನಿಮ್ಮ ಮಹಾನಾಯಕ ಮಾಧ್ಯಮವು 1 ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಯಾವುದೇ ಪಕ್ಷಗಳ, ರಾಜಕಾರಣಿಗಳ ಅಡಿಯಾಳಾಗದೇ ತನ್ನದೇ ಮಾರ್ಗದಲ್ಲಿ ಸಾಗುತ್ತಿರುವ ಮಹಾನಾಯಕ ಮಾಧ್ಯಮಕ್ಕೆ ಓದುಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಸಮಾನತೆಯನ್ನು ಸಾಧಿಸುವ ಧ್ಯೇಯದೊಂದಿಗೆ ಸಾಗುತ್ತಿರುವ ಮಾಧ್ಯಮವು ಈ ಒಂದು ವರ್ಷದಲ್ಲಿ ಸಾಕಷ್ಟು ಆರ್ಥಿಕ ಸಂಕಷ್ಟಗಳನ್ನು ಎದುರಿಸಿದರೂ ಎದೆಗುಂದದೇ ಮಾಧ್ಯಮ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದೆ. ಮಾಧ್ಯಮ ಒಂದು ವರ್ಷವನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಮಾಧ್ಯಮದ ಮೇಲೆ ಓದುಗರ ನಿರೀಕ್ಷೆ ಕೂಡ ಹೆಚ್ಚಿದೆ. ಹಾಗಾಗಿ ಮುಂದಿನ ಹಂತದಲ್ಲಿ ಮಾಧ್ಯಮವನ್ನು ಇನ್ನಷ್ಟು ದೊಡ್ಡಮಟ್ಟಕ್ಕೆ ತಲುಪಿಸಲು ಓದುಗರು ಹಾಗೂ ಸಮಾನ ಮನಸ್ಕರ ನೆರವು ಕೂಡ ಅಗತ್ಯವಾಗಿದೆ. ಮಹಾನಾಯಕ ಮಾಧ್ಯಮಕ್ಕೆ ನಿಮ್ಮ ಸಾಮಥ್ರ್ಯಕ್ಕೆ ಅನುಗುಣವಾಗಿ ನೆರವು ನೀಡುವಂತೆ ಮನವಿ ಮಾಡುತ್ತಿದ್ದೇವೆ. ನೆರವು ನೀಡಲು ಬಯಸುವವರು 9686872149ಗೆ ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಮಾಡಬಹುದಾಗಿದೆ. 

ಇತ್ತೀಚಿನ ಸುದ್ದಿ