ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
6 ತಿಂಗಳ ಹಿಂದೆ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಜೈಲು ಸೇರಿದ್ದರು. ಶುಕ್ರವಾರ ಹೈಕೋರ್ಟ್ ನ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆ ಪೂರ್ಣಗೊಂಡಿತ್ತು. ಇಂದು ಬೆಳಗ್ಗೆ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆಯಾಗಿದ್ದಾರೆ.
ಆರೋಪಿಗಳನ್ನ ಬಂಧಿಸಿದ ನಂತರ ಪ್ರಾಸಿಕ್ಯೂಷನ್, ಇವರನ್ನು ಯಾಕೆ ಬಂಧಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿರಲಿಲ್ಲ. ಈ ಲೋಪದ ಆಧಾರದಲ್ಲಿ ಎಲ್ಲರ ಜಾಮೀನು ಅರ್ಜಿಯನ್ನ ಪುರಸ್ಕರಿಸಲಾಗಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.
ಜೈಲಿನಿಂದ ಬಿಡುಗಡೆಯಾದ ಪವಿತ್ರಾ ಗೌಡ ನಗುನಗುತ್ತಾ ಹೊರ ಬಂದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಲು ನಿರಾಕರಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: