ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ವೇಳೆ ಪೇದೆಗೆ ಕಪಾಳ ಮೋಕ್ಷ ಮಾಡಿದ ಮಾಜಿ ಶಾಸಕ?
ರಾಯಚೂರು: ಹೊಟ್ಟೆಪಾಡಿಗೆ ದಲಿತ ನಾಯಕರು ಬಿಜೆಪಿಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ ಶಾಸಕರೋರ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವ ವಾಗ್ವಾದ ಉಂಟಾಗಿದೆ.
ಪ್ರತಿಭಟನಾಕಾರರು ಪ್ರತಿಕೃತಿಗೆ ಹಚ್ಚಿದ್ದ ಬೆಂಕಿ ವ್ಯಾಪಿಸಬಾರದು ಎಂದು ಅದನ್ನು ಎತ್ತಿಕೊಳ್ಳಲು ಹೋದ ಪಿ.ಸಿ. ರಾಘವೇಂದ್ರ ಎಂಬವರ ಕಪಾಳಕ್ಕೆ ಮಾಜಿ ಶಾಸಕ ಪಾಪಾ ರೆಡ್ಡಿ ಬಾರಿಸಿ, ಅವಾಚ್ಯ ಶಬ್ದಗಳಿಂದ ನಿಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka