ಬ್ರಾಹ್ಮಣರು ಕದ್ದು ಮುಚ್ಚಿ ಮಾಂಸ ಸೇವಿಸುತ್ತಾರೆ ಎಂದಿದ್ದ ಪೇಜಾವರ ಶ್ರೀ ಮೇಲೆ ಯಾಕೆ ಕೇಸು ಹಾಕಲಿಲ್ಲ? | ಹಂಸಲೇಖ ಬೆಂಬಲಿಗರ ಪ್ರಶ್ನೆ
ಬೆಂಗಳೂರು: ಇಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ತಮ್ಮ ಹೇಳಿಕೆ ಸಂಬಂಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ಸಂದರ್ಭದಲ್ಲಿ ಹಂಸಲೇಖ ಅವರ ಪರವಾಗಿ ಹೋಗಿದ್ದ ಸಂಘಟನೆಗಳನ್ನು ಹೊರಗೆ ಪ್ರವೇಶಿಸಲು ಬಿಡದೇ, ಹಂಸಲೇಖ ವಿರುದ್ಧ ಇರುವವರನ್ನು ಒಳಗೆ ಬಿಡಲಾಗಿದೆ ಎಂದು ಪೊಲೀಸರ ವಿರುದ್ಧ ಹಂಸಲೇಖ ಬೆಂಬಲಿಗರು ಆರೋಪಿಸಿದ್ದಾರೆ.
ಹಂಸಲೇಖ ಅವರನ್ನು ಬೆಂಬಲಿಸಲು ಪೊಲೀಸ್ ಠಾಣೆಗೆ ಬಂದಿದ್ದ ವಿವಿಧ ಸಂಘಟನೆಗಳ ಮುಖಂಡರು ಠಾಣೆ ಹೊರಗಡೆ ಪೊಲೀಸರು ಹಾಗೂ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಟ ಚೇತನ್ ಅಹಿಂಸಾ ಅವರನ್ನು ಬಿ ಟಿವಿ ವರದಿಗಾರ ಏಕವಚನ ಪ್ರಯೋಗಿಸಿ ಮಾತನಾಡಿದ್ದಾರೆ, ಇದು ಯಾವ ಪತ್ರಿಕಾ ಧರ್ಮ ಎಂದು ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಬಸವನಗುಡಿ ಪೊಲೀಸ್ ಠಾಣೆ ಬ್ರಾಹ್ಮಣರ ಪೊಲೀಸ್ ಠಾಣೆ ಎಂಬಂತೆ ನಡೆದುಕೊಳ್ಳುತ್ತಿದೆ. ಹಂಸಲೇಖ ಅವರು ವ್ಯಕ್ತಿಯ ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಸೆಕ್ಷನ್ ನಲ್ಲಿ ಹೇಗೆ ದೂರು ದಾಖಲಿಸಿದ್ದೀರಿ ಎಂದು ಹೋರಾಟಗಾರರು ಪ್ರಶ್ನಿಸಿದ್ದಾರೆ.
ಕೆಲವು ಬ್ರಾಹ್ಮಣರು ಕದ್ದು ಮುಚ್ಚಿ ಮದ್ಯ ಮಾಂಸ ಸೇವಿಸುತ್ತಾರೆ ಎಂದು ಪೇಜಾವರ ಶ್ರೀಗಳೇ ಸಂದರ್ಶನದಲ್ಲಿ ಹೇಳಿದ್ದರು. ಆಗ ಅವರ ವಿರುದ್ಧ ನೀವು ಯಾಕೆ ದೂರು ನೀಡಿಲ್ಲ? ಹಂಸಲೇಖ ಅವರು, “ಮಾಂಸ ತಿನ್ನುತ್ತಾರಾ?” ಎಂದು ಪ್ರಶ್ನಿಸಿದ್ದಾರೆಯೇ ಹೊರತು ತಿನ್ನುತ್ತಾರೆ ಎಂದು ಹೇಳಿಲ್ಲ, ಆದರೂ ಬಿಟ್ ಕಾಯಿನ್ ಪ್ರಕರಣವನ್ನು ಮರೆ ಮಾಚಲು, “ಶ್ರೀಕೃಷ್ಣ…. ಶ್ರೀಕೃಷ್ಣ ಭಟ್” ಎಂಬಾತನನ್ನು ರಕ್ಷಿಸಲು ಹಂಸಲೇಖ ಅವರ ಹೇಳಿಕೆಯನ್ನು ವಿವಾದ ಮಾಡಲಾಗಿದೆ. ಶ್ರೀಕೃಷ್ಣನನ್ನು ಶ್ರೀಕಿ ಎಂದು ಶಾರ್ಟ್ ಕಟ್ ನಲ್ಲಿ ಕರೆದು ಮೆರೆಸಲಾಗುತ್ತಿದೆ ಎಂದು ಸ್ಥಳದಲ್ಲಿದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಚಾರಣೆಗೆ ಹಾಜರಾದ ಹಂಸಲೇಖ: ಠಾಣೆ ಎದುರು ಪರ ವಿರೋಧ ಪ್ರತಿಭಟನೆ
ಶಾಕಿಂಗ್ ನ್ಯೂಸ್: ಕೈಯ ಮಣಿಕಟ್ಟು ಕೊಯ್ದುಕೊಂಡು ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣು
ರೈಲಿನಡಿಗೆ ತಲೆಯಿಟ್ಟು ಪಿಯು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!
ಜಾತಿ ಪ್ರಜ್ಞೆಯ ಬೇರುಗಳೂ ಮಾರುಕಟ್ಟೆಯ ಒತ್ತಡಗಳೂ | ವ್ಯವಸ್ಥೆಯನ್ನು ವಿಭಜಿಸುವ ಆಹಾರ ಶೋಷಿತರನ್ನು ಒಗ್ಗೂಡಿಸಲೂ ಸಾಧ್ಯ
ಬಡ ಜನತೆಗೆ ಸಿಹಿ ಸುದ್ದಿ ನೀಡಿದ ಪ್ರಧಾನಿ: ಉಚಿತ ಅಕ್ಕಿ ಯೋಜನೆ ಮುಂದುವರಿಕೆ
ರಾಕಿಂಗ್ ಸ್ಟಾರ್ ಯಶ್ ಕ್ಷಮೆ ಕೇಳಿ ದೊಡ್ಡತನ ಮೆರೆದ ಆಮೀರ್ ಖಾನ್ | ಅಷ್ಟಕ್ಕೂ ನಡೆದದ್ದೇನು ಗೊತ್ತಾ?
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಬೆದರಿಕೆ: ಹಿಂದೂ ಜಾಗರಣ ವೇದಿಕೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು