ಪರ್ಸಂಟೇಜ್ ಪಿತಾಮಹಾ ಸಿದ್ದರಾಮಯ್ಯ: ಕುಮಾರಸ್ವಾಮಿ ಟ್ವೀಟ್ ಬಾಣ
ಬೆಂಗಳೂರು: ಪರ್ಸಂಟೇಜ್ ವ್ಯವಹಾರದ ಪಿತಾಮಹಾ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಬಾಣಗಳನ್ನು ಬಿಟ್ಟಿದ್ದಾರೆ.
ಆಪ್ತ ಶಾಸಕರಿಗೆ ಮೀಟಿಂಗ್ ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ ಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ನ್ಯಾ.ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನಿಮ್ಮ ಕತ್ತಲೆ ಮುಖವಾಡ ಪರ್ಸೆಂಟೇಜ್ ಪಲ್ಲಕ್ಕಿಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿ ಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ. ಸಿದ್ಧ ಸೂತ್ರಧಾರ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ಜೆಡಿಎಸ್ ಜ್ವರ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ಸತ್ಯಭಕ್ಷ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚು ಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ. ಮತ್ತೆ ಮತ್ತೆ ಕೆಣಕುವ ದುಸ್ಸಾಹಸ ಬೇರೆ ಎಂದು ಟೀಕಿಸಿದ್ದಾರೆ.
ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ ಎಂದು ಪ್ರಶ್ನಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂಗಳೂರು: ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಕಾರ್ಮಿಕರ ದಾರುಣ ಸಾವು
ಮಹಿಳೆಯ ಮೇಲೆಯೇ ಹರಿದ ಕೆಎಸ್ಸಾರ್ಟಿಸಿ ಬಸ್: ಮಹಿಳೆಯ ದಾರುಣ ಸಾವು
ಈ ಜೇನು ತುಪ್ಪದ ಬೆಲೆ ಕೆ.ಜಿ.ಗೆ 8 ಲಕ್ಷಕ್ಕೂ ಅಧಿಕ: ಇದರಲ್ಲಿ ಅಂತಹ ವಿಶೇಷತೆ ಏನಿದೆ?