ಮತದಾನ ಮಾಡಲು ಹೋಗುತ್ತಿದ್ದ ವ್ಯಕ್ತಿಯನ್ನು ತುಳಿದು ಕೊಂದ ಕಾಡಾನೆ!
ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದ ವ್ಯಕ್ತಿ ಇರುವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿಧಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ(42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಹಳೆ ಮಾಟಳ್ಳಿ ಗ್ರಾಮದಿಂದ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮಕ್ಕೆ ಪತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪತಿಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಗೆ ಪುಟ್ಟಸ್ವಾಮಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ನಂತರ ಪತ್ನಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಕಾಡಂಚಿನ ಗ್ರಾಮಗಳ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ದ್ವಿಚಕ್ರವಾಹನ ಹಾಗೂ ಇನ್ನಿತರ ವಾಹನಗಳಲ್ಲಿ ತೆರಳಲು ಸಾಧ್ಯವಾಗದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿದೆ. ಇನ್ನು ಮುಂದಾದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಪ್ರಜ್ಞಾವಂತ ನಾಗರಿಕರು ಆಗಮಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw