ಪ್ರಮಾಣವಚನ ವೇಳೆ ವೇದಿಕೆಯಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿ: ತನಿಖೆಗೆ ರಾಜ್ಯಪಾಲರ ಪತ್ರ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳು ವ್ಯಕ್ತಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.
ಎಚ್.ವಿಶ್ವನಾಥ್ ಪತ್ರದ ಆಧಾರ ಮೇಲೆ ಸಿಎಸ್ಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್,
ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್.ಶಿವಣ್ಣ ಎಂಬ ವ್ಯಕ್ತಿ ಕ್ರಿಮಿನಲ್ ಹಿನ್ನಲೆ ಉಳ್ಳವರಾಗಿದ್ದಾರೆ. ಇಂತಹವರು ಸಿಎಂ ಪದಗ್ರಹಣ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಭದ್ರತಾ ಲೋಪ ಮತ್ತು ಕಾನೂನು ಉಲ್ಲಂಘನೆ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಹೆಚ್.ವಿಶ್ವನಾಥ್ ಪತ್ರ ಬರೆದಿದ್ದರು.
ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ದೊಡ್ಡ ಭದ್ರತಾ ಲೋಪ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದು ಸೂಚಿಸಿದ್ದಾರೆ.
ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ದೊಡ್ಡ ಭದ್ರತಾ ಲೋಪ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದು ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw