ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಯೆರಿಕೆ
ನವದೆಹಲಿ: ಕಳೆದ 14 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಇಂದು ಕೂಡ ಗ್ರಾಹಕರಿಗೆ ಪೆಟ್ರೋಲ್, ಡೀಸೆಲ್ ಬೆಲೆಯೆರಿಕೆಯ ಶಾಕ್ ನೀಡಿದೆ.
ಇಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳು ಪ್ರತಿ ಲೀಟರ್ ಗೆ 40 ಪೈಸೆಯಷ್ಟು ಏರಿಕೆಯಾಗಿದೆ. ಇಲ್ಲಿಯವರೆಗೆ 14 ದಿನಗಳಲ್ಲಿ ಹನ್ನೆರಡು ಬಾರಿ ಪರಿಷ್ಕರಣೆಯಾಗಿದ್ದು, ಪ್ರತಿ ಲೀಟರ್ ಗೆ ಸುಮಾರು 8.40 ರೂ. ನಷ್ಟು ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 103.81 ರೂ. ಇದ್ದರೆ, ಡೀಸೆಲ್ ಲೀಟರ್ ಗೆ 95.07 ರೂ ರೂ. ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ, ಪೆಟ್ರೋಲ್ 84 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 43 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ 118.83 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 103.07 ರೂ.ಇದೆ.ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.23 ರೂಪಾಯಿ ದಾಖಲಾಗಿದೆ.ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ಗೆ 115.34 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 102.16 ರೂಪಾಯಿ ನಿಗದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಂಝಾನ್ ಉಪವಾಸದ ಸಂದರ್ಭದಲ್ಲಿ ಮುಸಲ್ಮಾನರು ಖರ್ಜೂರ ಸೇವಿಸುವುದು ಯಾಕೆ ಗೊತ್ತಾ?
ಕೈಗಳನ್ನು ಕಟ್ಟಿದ ಸ್ಥಿತಿಯಲ್ಲಿ ಮಹಿಳೆಯರ ಬೆತ್ತಲೆ ಮೃತದೇಹ ಪತ್ತೆ: ರಷ್ಯಾ ಸೈನಿಕರ ಕ್ರೂರತೆ ಎಂದ ಉಕ್ರೇನ್
ರಷ್ಯಾದ ಗುಂಡಿನ ದಾಳಿಯಲ್ಲಿ ಉಕ್ರೇನಿಯನ್ ಫೋಟೋ ಜರ್ನಲಿಸ್ಟ್ ಸಾವು
ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ: ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ
ರಣಬೀರ್ ಕಪೂರ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ