ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಜನರ ಜೇಬಿಗೆ ಕತ್ತರಿ - Mahanayaka
3:23 AM Wednesday 11 - December 2024

ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಜನರ ಜೇಬಿಗೆ ಕತ್ತರಿ

petrol price
01/11/2021

ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಾಗಲೋಟ ಇನ್ನೂ ನಿಂತಿಲ್ಲ. ಸೋಮವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 109.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.50 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ದಾಖಲಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.15 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.35 ರೂಪಾಯಿ ಇದೆ.  ಹಾಗೆಯೇ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ಇದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ