ಸತತ 7ನೇ ದಿನವೂ ಏರಿಕೆಯಾದ ಪೆಟ್ರೋಲ್ ದರ!

petrol
02/11/2021

ನವದೆಹಲಿ: ಸತತ 7ನೇ ದಿನವಾದ ಇಂದು ಕೂಡ ಪೆಟ್ರೋಲ್ ದರ ಅತ್ಯಧಿಕ ಏರಿಕೆಯಾಗಿದ್ದು,  ಇತ್ತೀಚೆಗೆ ಏರಿಕೆಯಾಗುತ್ತಿರುವ ದರವು ಇಂಧನ ಬೆಲೆಯನ್ನು ಅತ್ಯಧಿಕ ಮಟ್ಟಕ್ಕೆ ತಳ್ಳಿದೆ.  ಇಂದು(ನವೆಂಬರ್ 2) ಪೆಟ್ರೋಲ್ ದರ ಪ್ರತೀ ಲೀಟರ್ ಗೆ 35 ಪೈಸೆ ಹೆಚ್ಚಿಸಲಾಗಿದೆ. ಆದರೆ ಡೀಸೆಲ್ ದರ ಇಂದು ಏರಿಕೆಯಾಗಿಲ್ಲ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 11.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version