PFI 5 ವರ್ಷಗಳ ಕಾಲ ನಿಷೇಧ: ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ - Mahanayaka

PFI 5 ವರ್ಷಗಳ ಕಾಲ ನಿಷೇಧ: ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ

basavaraj bommai
28/09/2022

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI)ಯನ್ನು 5 ವರ್ಷಗಳ ಕಾಲ ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ನಿವಾಸದ ಬಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದರು.

ಪಿಎಫ್ ಐಯನ್ನು ನಿಷೇಧಿಸುವಂತೆ ಸಿಪಿಐ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಘಟನೆಯೊಂದಿಗೆ ಯಾರೂ ನಂಟನ್ನಿಟ್ಟುಕೊಳ್ಳಬಾರದು ಎಂದು ಸಿಎಂ ಹೇಳಿದರು.


Provided by

ನಿಷೇಧಿತ ಕೆ. ಎಫ್. ಡಿ ಮತ್ತು ಸಿಮಿ ಸಂಘಟನೆಗಳ ರೂಪಾಂತರಿಯೇ ಈ ಪಿ.ಎಫ್.ಐ. ಈ ದೇಶದ ಕಾನೂನು ಹಾಗೂ ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಈ ಸಂಘಟನೆ, ವಿದೇಶಗಳಿಂದ ಬರುವ ಆಜ್ಞೆಯ ಪ್ರಕಾರ ಹಲವಾರು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎಂದು ಅವರು ಹೇಳಿದರು.

ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ. ಈ ಮಹತ್ವದ ಕ್ರಮವನ್ನು ಕೈಗೊಂಡ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ‌ ಎಂದು ಬೊಮ್ಮಾಯಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ