ಪಿಎಫ್ ಐ ಸಹಿತ ನಿಷೇಧಿತ 8 ಸಂಘಟನೆಗಳ ಕಚೇರಿಗೆ ಸೀಲ್
ದಕ್ಷಿಣ ಕನ್ನಡ: ಕೇಂದ್ರ ಸರಕಾರವು ಪಿಎಫ್ ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯ ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ.
ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ, ಪಾಂಡೇಶ್ವರ, ಬಂದರ್ ಠಾಣೆ ವ್ಯಾಪ್ತಿಯ ಕಚೇರಿಗಳಿಗೆ ದಾಳಿ ಮಾಡಿ ದಾಖಲೆ ಪತ್ರಗಳು, ಕಂಪ್ಯೂಟರ್ ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆದು ಬೀಗ ಹಾಕಲಾಗಿದೆ.
ಕಸಬಾ ಬೆಂಗರೆ, ಚೊಕ್ಕಬೆಟ್ಟು, ಕಾಟಿಪಳ್ಳ ಎರಡನೆ ಬ್ಲಾಕ್, ಅಡ್ಡೂರ್, ಕಿನ್ನಿಪದವು, ಕೆ.ಸಿ.ರೋಡ್, ಇನೋಳಿ, ಮಲ್ಲೂರು, ಕುದ್ರೋಳಿಯ ಪಿಎಫ್ಐ ಮತ್ತು ಬಂದರ್‌ನ ಸಿಎಫ್ಐ ಹಾಗೂ ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿಯ ಇನ್ಫೋರ್ಮೇಶನ್ ಆ್ಯಂಡ್ ಎಂಪವರ್ಮೆಂಟ್ ಕಚೇರಿಗೆ ಬೀಗ ಜಡಿಯಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka