ಪಿಎಫ್ ಐ 5 ವರ್ಷಗಳ ಕಾಲ ನಿಷೇಧ: ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಹೀಗೆ!
ಬೆಂಗಳೂರು: ದೇಶಾದ್ಯಂತ ಪಿಎಫ್ ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೇಶಾದ್ಯಂತ ಪಿಎಫ್‌ಐ ಅನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರವನ್ನೇ ಕೈಗೊಂಡಿದೆ. ಆದರೆ ಇಷ್ಟು ತಡವಾಗಿ ಬ್ಯಾನ್ ಮಾಡಿರುವುದು ಗುಪ್ತಚರ ಇಲಾಖೆಯ ದೊಡ್ಡ ವೈಫಲ್ಯವಾಗಿದೆ ಎಂದು ಅವರು ಟೀಕಿಸಿದ್ದಾರೆ.
ಕರ್ನಾಟಕ, ಗುಜರಾತ್, ಅಸ್ಸಾಂ, ಮಧ್ಯಪ್ರದೇಶ, ಸೇರಿದಂತೆ ಇದು ದೇಶವ್ಯಾಪಿ ಇದ್ದಂತಹ ಜಾಲ. ಇಷ್ಟು ವರ್ಷ ಇಡಿ, ಗುಪ್ತಚರ ಇಲಾಖೆ ಹಾಗೂ ಸ್ಟೇಟ್ ಡಿಪಾರ್ಟ್ಮೆಂಟ್ ಗಳಿಗೆ ಅವರ ಭಯೋತ್ಪಾದನಾ ಚಟುವಟಿಕೆ, ಅಕ್ರಮ ಹಣ ವರ್ಗಾವಣೆಗಳು ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದರು.
ಈ ಸಂಘಟನೆ ದೇಶಾದ್ಯಂತ ಇದ್ದರೂ ಇಷ್ಟು ದಿನ ಯಾಕೆ ಹೀಗೇ ಬಿಟ್ಟಿದ್ದರು ಎಂಬ ಪ್ರಶ್ನೆ ಮೂಡುತ್ತದೆ. ಇಷ್ಟು ತಡವಾಗಿ ಪಿಎಫ್ ಐಯನ್ನು ಬ್ಯಾನ್ ಮಾಡಿರುವುದು ಅಧಿಕಾರಿಗಳ ದೊಡ್ಡ ವೈಫಲ್ಯ ಎಂದು ಹೇಳಿದರು.
ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಹಾಗೂ ಅದರ ಅಂಗಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಲ್ ಇಂಡಿಯಾ ಇಮಾನ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka