ಪಿಎಫ್ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರ ಬಂಧನ
27/09/2022
ದಕ್ಷಿಣ ಕನ್ನಡ: ಎನ್.ಐ.ಎ. ದಾಳಿ ಬಳಿಕ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಿ.ಎಫ್.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮುಂಜಾನೆ ಈ ಮೂವರ ಮನೆಗೆ ದಾಳಿ ಮಾಡಿದ ಪೊಲೀಸರು ಪಿ.ಎಫ್.ಐ. ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮುಖಂಡರಾದ ಫಿರೋಝ್ ಖಾನ್ ಗೂಡಿನಬಳಿ, ರಾಝಿಕ್ ಗೂಡಿನಬಳಿ ಎಂಬವರನ್ನು ವಶಕ್ಕೆ ಪಡೆದು ಬಳಿಕ ತಹಶೀಲ್ದಾರ್ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka