ಪಿಎಫ್ ಐ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ: ಲಘು ಲಾಠಿಚಾರ್ಜ್
ಉಡುಪಿ: ಪಿಎಫ್ ಐ ಕಚೇರಿ ಮೇಲಿನ ಎಎನ್ ಐ ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಪಿಎಫ್ ಐ ಕಾರ್ಯಕರ್ತರು ಉಡುಪಿ ನಗರದ ಹಳೆ ಡಯನಾ ಸರ್ಕಲ್ ನಲ್ಲಿ ಇಂದು ಸಂಜೆ ದಿಢೀರ್ ಆಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪೊಲೀಸರಿಂದ ಅನುಮತಿ ಪಡೆಯದೆ ಏಕಾಏಕಿ ರಸ್ತೆಯನ್ನು ತಡೆದ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಡುಪಿ ನಗರ ಪೊಲೀಸರು ಪ್ರತಿಭಟನಕಾರ ಮೇಲೆ ಲಾಠಿ ಚಾರ್ಜ್ ನಡೆಸಿ ಚದುರಿಸಿದರು.
ಬಳಿಕ ಕೆಲವು ಮಂದಿ ಪಿಎಫ್ ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಉಡುಪಿ ಡಿವೈಎಸ್ಪಿ ಸದಾನಂದ ನಾಯ್ಕಿ, ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka