ಪಿಎಫ್ ಐ ನಾಯಕರ ಮೇಲಿನ ದಾಳಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಬೆಂಗಳೂರು: ಪಿಎಫ್ ಐ ಮತ್ತು ಎಸ್ ಡಿಪಿಐ ಮೇಲೆ ನಡೆದಿರುವುದು ಪೊಲೀಸ್ ದಾಳಿ ಅಲ್ಲ, ಮುನ್ನೆಚ್ಚರಿಕೆಯಿಂದ ನಡೆಸಲಾಗಿರುವ ಕಾರ್ಯಾಚರಣೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ದೇವನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಹಶೀಲ್ದಾರ್ ಮೂಲಕವೇ ಪೊಲೀಸರು ಕಾನೂನಾತ್ಮಕವಾಗಿ ಅಗತ್ಯ ಕ್ರಮ ಜರುಗಿಸಿದ್ದಾರೆ. ಕರ್ನಾಟಕವಷ್ಟೇ ಅಲ್ಲ, ಇತರ ರಾಜ್ಯಗಳಲ್ಲಿಯೂ ಇಂಥ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬೇಕಿದೆ, ನಂತರ ಅಧಿಕೃತವಾಗಿ ಪ್ರತಿಕ್ರಿಯಿಸುತ್ತೇನೆ. ಪೊಲೀಸರಿಗೆ ವಿವಿಧೆಡೆಯಿಂದ ಹತ್ತು ಹಲವು ಮಾಹಿತಿ ಬಂದಿರುತ್ತವೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka