ಕರಾವಳಿಯ ಬಿಜೆಪಿ ಶಾಸಕರೊಬ್ಬರದ್ದೆನ್ನಲಾದ ಅಸಭ್ಯ ಭಂಗಿಯ ಫೋಟೋ ವೈರಲ್!
ಕರಾವಳಿಯ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆಗೆ ಅಸಭ್ಯ ಭಂಗಿಯಲ್ಲಿರುವ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕನೊಬ್ಬ ಮಂಚದಲ್ಲಿ ಮಹಿಳೆ ಜೊತೆಗೆ ಅಶ್ಲೀಲ ಭಂಗಿಯಲ್ಲಿರುವ ಚಿತ್ರ ಬಿಜೆಪಿ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.
ಈಗಾಗಲೇ ಪುತ್ತೂರು ಹಾಗೂ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸುವಂತೆ ಕಾರ್ಯಕರ್ತರ ಒತ್ತಡ ಹೆಚ್ಚಾಗ್ತಿದ್ದಂತೆ ಈ ವೈರಲ್ ಫೋಟೊ ಭಾರೀ ಸಂಚಲನ ಉಂಟುಮಾಡಿದೆ.
ಮಹಿಳೆಯೊಂದಿಗೆ ಇರುವ ಫೋಟೋಗಳು ವೈರಲ್ ಆಗಿದ್ದು, ಈ ಸಂಬಂಧ ಶಾಸಕರು ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ದೂರು ನೀಡಿದ್ದಾರೆ ಎಂದೂ ವರದಿಯಾಗಿದೆ. ಮಹಿಳೆಯೊಂದಿಗಿನ ಫೋಟೋವನ್ನು ಶಾಸಕರು ಅಲ್ಲಗಳೆದಿದ್ದು, ನನ್ನ ಫೋಟೋವನ್ನು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದಿದ್ದಾರೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw