ಬಿಜೆಪಿ ಪ್ರಚಾರ ವಾಹನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೋ ಬಳಕೆ: ವಾಹನ ವಶಕ್ಕೆ ಪಡೆದ ಅಧಿಕಾರಿಗಳು
ಬಿಜೆಪಿಯ ಚುನಾವಣಾ ಪ್ರಚಾರದ ವಾಹನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸಿದ ಬಗ್ಗೆ ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವಾಹನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಎಲ್.ಇ.ಡಿ.ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ವಾಹನದಲ್ಲಿ ಶ್ರೀಕ್ಷೇತ್ರದ ಫೋಟೊ ಬಳಸುತ್ತಿದ್ದ ಬಗ್ಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಇಂದು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw